ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯು
೨೦೨೨-೨೩ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿ ವೇತನ ಯೋಜನೆಯನ್ನು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ(ಎಸ್.ಎಸ್.ಪಿ.) ಅಳವಡಿಸಿಕೊಂಡು ಜಾರಿಗೊಳಿಸಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಜಿಲ್ಲೆಯಲ್ಲಿ ೧ರಿಂದ ೧೦ನೇ ತರಗತಿಯವರೆಗಿನ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್‌ಶಿಫ್ ಪೋರ್ಟಲ್‌ನ (http://ssp.karnataka.gov.in) ಮೂಲಕ ಮತ್ತು ಎಸ್.ಎಸ್.ಎಲ್.ಸಿ. ನಂತರದ ವ್ಯಾಸಂಕ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್‌ನ
((http://ssp.postmetric.karnataka.gov.in)) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸದರಿ ಅರ್ಜಿ ಸಲ್ಲಿಸಿದ ಪ್ರತಿಯ ನಕಲನ್ನು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂಗಳಿಗೆ, ನಗರ ಸ್ಥಳೀಯ ಸಂಸ್ಥೆಯಲ್ಲಿ(ಮಹಾನಗರಪಾಲಿಕೆ, ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣಪಂಚಾಯಿತಿ) ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳಿಗೆ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಸಬಹುದಾಗಿದೆ.
ಫಲಾನುಭವಿಗಳು ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆಯ ಸೂಚನೆಗಳನ್ನು ಗಮನಿಸಿ ಅರ್ಜಿ ಸಲ್ಲಿಸಬೇಕು. ತಾಂತ್ರಿಕ ಅಡಚಣೆಗಳುಂಟಾದಲ್ಲಿ ಸಹಾಯವಾಣಿ ಸಂಖ್ಯೆ ೧೯೦೨ನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಶಿಲ್ಪಾದೊಡ್ಮನಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಲ್ಕೊಳ ಸರ್ಕಲ್, ಬಿ.ಎಸ್.ಎನ್.ಎಲ್. ಕಚೇರಿ ಪಕ್ಕ, ಸಾಗರ ರಸ್ತೆ, ಶಿವಮೊಗ್ಗ. ದೂರವಾಣಿ ಸಂಖ್ಯೆ ೦೮೧೮೨-೨೯೫೨೩೪, ೨೫೧೬೭೬ನ್ನು ಸಂಪರ್ಕಿಸಬಹುದಾಗಿದೆ.