ಶಿವಮೊಗ್ಗ,
ಎಲೆ ಚುಕ್ಕಿ ರೋಗ, ಹಳದಿ ರೋಗ, ಕೊಳೆ ರೋಗ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ಶಾಕ್ ಎದುರಾಗಿದೆ.ಅಡಿಕೆ ಧಾರಣೆ ಕಳೆದ ಈ ಎರಡು ತಿಂಗಳ ಅವಧಿಯಲ್ಲಿ
ಕ್ವಿಂಟಲ್‌ಗೆ10.000ದಿಂದ 15.000 ರೂವರೆಗೆ ಕುಸಿತ ಕಂಡಿದೆ. ಸೆಪ್ಟೆಂಬರ್ ಮೊದಲ ವಾರ ರಾಶಿ ಇಡಿ ಅಡಿಕೆ ಬೆಲೆ ಕ್ವಿಂಟಲ್ ಗೆ ೫೮,೦೦೦ ರೂ.ವರೆಗೂ ಇತ್ತು. ಅಕ್ಟೋಬರ್‌ನಲ್ಲಿ 50.000 ರೂ.ಗೆ ಇಳಿದು ನಂತರ ಕಡಿಮೆಯಾಗಿ ಡಿಸೆಂಬರ್ ಎರಡನೇ ವಾರದಲ್ಲಿ ೩೯ ಸಾವಿರ ರೂ.ಗೆ ತಲುಪಿದೆ.
೨೦೧೪ -೧೫ರಲ್ಲಿ ರಾಶಿ ಇಡಿ ಅಡಿಕೆ ದರ ಒಂದು ಲಕ್ಷ ರೂ.ವರೆಗೂ ತಲುಪಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ನಂತರ ದಿನಗಳಲ್ಲಿ ಕುಸಿತ ಕಂಡು ಕಳೆದ ನಾಲ್ಕು ವರ್ಷಗಳಿಂದ ೫೦ ಸಾವಿರ ರೂ. ಆಸುಪಾಸಿನಲ್ಲಿತ್ತು.
ಭೂತಾನ್ ಸೇರಿದಂತೆ ಕೆಲವು ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ದರ ಕುಸಿತಕ್ಕೆ ಕಾರಣ ಎನ್ನಲಾಗಿದೆ.