ಶಿವಮೊಗ್ಗ, ಡಿ.13:

ಸದ್ದು ಮಾಡದೆ ಕರ್ತವ್ಯದಲ್ಲಿ ಬೆರೆತು, ಸದ್ದಿಲ್ಲದೆ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಬೆರಳು ಮುದ್ರೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಸಬ್ ಇನ್ಸ್ಪೆಕ್ಟರ್ ಅತಿಕ್ ಉರ್ ರೆಹಮಾನ್ ಅವರ ಪ್ರಶಂಸನೀಯ ಸೇವೆಗಾಗಿ ಮಾನ್ಯ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕ ದೊರೆತಿದೆ.

2020ರ ಸಾಲಿನ ಸ್ವಾತಂತ್ರ್ಯೋತ್ಸವ ನಿಮಿತ್ತ ನೀಡಲಾಗುವ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪುರಸ್ಕೃತರಾಗಿದ್ದ ರೆಹಮಾನ್ ಅವರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯಪಾಲರಿಂದ ಈ ಪ್ರಶಸ್ತಿಯನ್ನು ಪಡೆದಿದ್ದಾರೆ ರಹಮಾನ್ ಅವರು 1993 ರಲ್ಲಿ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿದ್ದು, ಈ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅವರನ್ನು ಜಿಲ್ಲಾ ರಕ್ಷಣಾಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಆತ್ಮೀಯವಾಗಿ ಅಭಿನಂದಿಸಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!