ಶಿವಮೊಗ್ಗ, ಡಿ.18:

ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಎರಡೂವರೆ ಕೋಟಿ ಅನುದಾನ ನೀಡುವುದಾಗಿ ಮಾಜಿ ಡಿಸಿಎಂ, ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಗರದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯದ ಭೋಜನಾಲಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವುದರೊಂದಿಗೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

” ಸಹ್ಯಾದ್ರಿ ಕಾಲೇಜಿಗೆ ಉನ್ನತವಾದ ಇತಿಹಾಸವಿದೆ. ರಾಜ್ಯದ ವಿವಿಧ ಭಾಗಗಳಿಂದ ಹಲವಾರು ವಿದ್ಯಾರ್ಥಿನಿಯರು ಇಲ್ಲಿಗೆ ಆಗಮಿಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದನ್ನು ಗಮನಿಸಿದರೆ ಈಗಿರುವ ವ್ಯವಸ್ಥೆಯನ್ನು ಇನ್ನೂ ಉನ್ನತೀಕರಿಸುವುದು ಅಗತ್ಯವಾಗಿದೆ. ಹಾಗಾಗಿ ಸಹ್ಯಾದ್ರಿ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಇನ್ನೂ 60 ಕೊಠಡಿಗಳ ಅವಶ್ಯಕತೆ ಇದೆ. ಅದಕ್ಕಾಗಿ ಎರಡೂವರೆ ಕೋಟಿ ಅನುದಾನವನ್ನು ನೀಡಲು ನಾನು ಬದ್ಧನಾಗಿದ್ದೇನೆ” ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್ ಅರುಣ್, ಸೂಡ ಅಧ್ಯಕ್ಷರಾದ ನಾಗರಾಜ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಬಿ.ಪಿ ವೀರಭದ್ರಪ್ಪ,ಕುಲಸಚಿವರಾದ ಅನುರಾಧ ಜಿ, ಶ್ರೀಕಾಂತೇಶ್, ಡಾ. ಧನಂಜಯ ಕೆ.ಬಿ., ಡಾ ರಾಜೇಶ್ವರಿ ಎನ್., ವಾಗ್ದೇವಿ ಎಚ್.ಎಂ, ಕಾಲೇಜಿನ ಬೋಧಕ ಬೋಧಕೇತರರು ಉಪಸ್ಥಿತರಿದ್ದರು.

ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಕೆ. ವೀಣಾ ಅವರು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ವಸತಿ ನಿಲಯದ ಪಾಲಕರಾದ ಡಾ. ಶುಭಾ ಮರವಂತೆ ಅವರು ಕಾರ್ಯಕ್ರಮ ನಿರೂಪಿಸಿದರು.

By admin

ನಿಮ್ಮದೊಂದು ಉತ್ತರ

error: Content is protected !!