
ಶಿವಮೊಗ್ಗ,ಡಿ.18:
ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಶಾಸಕರ ಚುನಾವಣೆಯಲ್ಲಿ ಚುನಾಯಿತರಾದ ಮಾಜಿ ವಿಧಾನ ಪರಿಷತ್ ಸಭಾಪತಿ ಡಿಎ ಶಂಕರ್ ಮೂರ್ತಿ ಅವರ ಪುತ್ರ ಶಾಸಕ ಡಿಎಸ್ ಅರುಣ್ ಅವರು ತಮ್ಮ ಶಾಸಕಾವಧಿಯ ಮೊದಲ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಿಸುವ ಬೇಡಿಕೆಗೆ ಪೂರಕವಾಗಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಾಸಿಕ ಗೌರವದನವನ್ನು 3,000 ದಿಂದ 4000ಕ್ಕೆ ಉಪಾಧ್ಯಕ್ಷರ ಮಾಸಿಕ ಗೌರವಧನವನ್ನು 2000 ದಿಂದ 3000ಕ್ಕೆ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಮಾಸಿಕ ಗೌರವ ಧನವನ್ನು 1000 ದಿಂದ 2,000 ಕ್ಕೆ ಹೆಚ್ಚಿಸಿ ಇಂದು ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಂಟಿ ನಿರ್ದೇಶಕರು ಸರ್ಕಾರದ ಪರವಾಗಿ ಆದೇಶ ಹೊರಡಿಸಿದ್ದಾರೆ.


ಶಿವಮೊಗ್ಗ ಮೂಲದ ಸ್ಥಳೀಯ ಸಂಸ್ಥೆಗಳ ಹಲವು ಜಿಲ್ಲೆಗಳ ವ್ಯಾಪ್ತಿಯನ್ನೊಳಗೊಂಡ ಜನಪ್ರತಿನಿಧಿಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಶಾಲಿಯಾದ ನಂತರ ಮೊದಲ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳಕ್ಕೆ ಶಾಸಕ ಡಿಎಸ್ ಅರುಣ್ ಪ್ರಸ್ತಾಪ ಮಂಡಿಸಿದ್ದರು.


ಅಭಿನಂದನೆಗಳು: ಇಂದು ಈ ವಿಚಾರದ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಗಳ ಗೌರವಧನವನ್ನು ಹೆಚ್ಚಿಸಿದ್ದು ರಾಜ್ಯ ಸರ್ಕಾರಕ್ಕೆ ಶಾಸಕ ಡಿಎಸ್ ಅರುಣ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
