ಅಧಿಕಾರ ದುರುಪಯೋಗಪಡಿಸಿಕೊಂಡ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಅವರನ್ನು ಅಮಾತನು ಮಾಡಿ ತನಿಖೆ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಆರ್. ಕೃಷ್ಣಪ್ಪ ಒತ್ತಾಯಿಸಿದ್ದಾರೆ.


ಅವರು ಇಂದು ಪ್ರೆಸ್ ಟ್ರಸ್ಟ್‌ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಶಿಲ್ಪ ಎಂ. ದೊಡ್ಡಮನಿ ಕಳೆದ ೮ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸರ್ಕಾರದ ಹಣವನ್ನು ಸ್ವಂತಕ್ಕೆ ಡ್ರಾ ಮಾಡಿಕೊಂಡಿದ್ದಾರೆ. ವಿಕಲಚೇತನರಿಗೆ ನೀಡುವ ಮಾಸಿಕ ಹಣಕ್ಕೂ ಕಮಿಷನ್ ಕೇಳುತ್ತಿದ್ದಾರೆ ಎಂದು ದೂರಿದರು.


ಈ ಬಗ್ಗೆ ವಿಆರ್‌ಡಬ್ಲ್ಯೂ ಆಗಿರುವ ರಮೇಶ್ ಅವರು ಪ್ರಶ್ನೆ ಮಾಡಿದರೆ ಅವರ ಮೇಲೆಯೇ ಭದ್ರಾವತಿ ಶಾಸಕರ ಎದುರಿನಲ್ಲಿಯೇ ಹಲ್ಲೆ ಮಾಡಿದ್ದಾರೆ. ಜೊತೆಗೆ ಸುಳ್ಳು ಜಾತಿನಿಂದನೆ ಕೇಸು ದಾಖಲು ಮಾಡಿದ್ದಾರೆ. ಇಂತಹ ಅಧಿಕಾರಿಯನ್ನು ಕೂಡಲೇ ಕರ್ತವ್ಯದಿಂದ ಅಮಾನತುಗೊಳಿಸಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕು ಇಲ್ಲದಿದ್ದರೆ ನ್ಯಾಯಾಲಯದ ಮೊರೆಹೋಗುವುದಾಗಿ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ಸಿ. ಶಿವರಾಜ್, ಬಿ.ಸಿ. ಗಿರೀಶ್ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!