ಶಿವಮೊಗ್ಗ,ಡಿ.21:
ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯ ಶಾಮೀರ್ ಖಾನ್ ಅವರ ಮನೆಯ ಮೇಲೆ ಇಂದು ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ 40 ಕೆಜಿ ಅಕ್ರಮ ಗೋಮಾಂಸ ಪತ್ತೆಯಾಗಿದೆ.
ಟಿಪ್ಪು ನಗರದಲ್ಲಿರುವ ಶಾಮೀರ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಇಟ್ಟುಕೊಂಡಿದ್ದ 40 ಕೆಜಿ ಗೋಮಾಂಸ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಶಾಮೀರ್ ಪುತ್ರ ಇಬಾದ್ ಹಾಗೂ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ದಾಳಿ ನಡೆಸುತ್ತಿದ್ದಂತೆಯೇ ಅವರುಗಳು ಪರಾರಿಯಾಗಿದ್ದಾರೆ.
ಇನ್ನು ಈ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಕ್ರಮಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿದೆ ಎನ್ನಲಾಗಿದೆ.
ತುಂಗಾನಗರ ಪೊಲೀಸ್ ಠಾಣೆಯಲ್ಲಿ Cow slaughter act section 4, 5 , 12 ಅಡಿಯಲ್ಲಿ ಎಫ್’ಐಆರ್ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.