ಬೆಳಗಾವಿ,ಡಿ.21:

ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಭರವಸೆಯ ಬೆಳಕು ನೀಡಿದೆ.

ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧದ “ಚರ್ಚೆ”ಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈಗಾಗಲೇ ಸಾವಿರಾರು ನಿವೃತ್ತ ನೌಕರರು ಹಳೆ ಪಿಂಚಣಿಯನ್ನೇ ಮುಂದುವರೆಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದ್ದಾರೆ.
ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸಿರುವ ಬಗ್ಗೆ ಸದಸ್ಯರು ಸದನದ ಗಮನಕ್ಕೆ ತಂದಿದ್ದಾರೆ. ರಾಜಸ್ಥಾನ, ಛತ್ತೀಸ್ಘಡ ಹೀಗೆ ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿಯನ್ನೇ ಮುಂದುವರೆಸಿದ್ದಾರೆ .

ಅಂತಿಮವಾಗಿ ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

( ಸಾಮಾಜಿಕ ಜಾಲತಾಣದ ನಿಖರ ಮಾಹಿತಿ)

By admin

ನಿಮ್ಮದೊಂದು ಉತ್ತರ

error: Content is protected !!