ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ನಿಂದ ಕೇಂದ್ರ ಹಾಗೂ ರಾಜ್ಯ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ‘ಬದಲಾವಣೆಗಾಗಿ- ಯುವ ಆಕ್ರೋಶದ ಹೆಜ್ಜೆ’ ಜಾಥಾ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿ. 23 ರಂದು ಬೆಳಗ್ಗೆ 11 ಗಂಟೆಗೆ ನಗರದ ರಾಮಣ್ಣ ಶೆಟ್ಟಿ ಪಾರ್ಕ್ನಿಂದ ಆಶೋಕ ವೃತ್ತ(ಬಸ್ ಸ್ಯಾಂಡ್ ವೃತ್ತ) ದವರೆಗೆ ದುರಾಡಳಿತದ ಕೇಂದ್ರ ಹಾಗೂ ರಾಜ್ಯ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಬದಲಾವಣೆಗಾಗಿ- ಯುವ ಆಕ್ರೋಶದ ಹೆಜ್ಜೆ ಜಾಥಾ ನಡೆಯಲಿದೆ.
ಈ ಜಾಥದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಶಿವಮೊಗ್ಗ ಮಹಾನಗರ ಪಾಲಿಕೆಯ
ವಿರೋಧ ಪಕ್ಷದ ನಾಯಕರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಪಾಲಿಕೆ ಸದಸ್ಯರು, ಎಲ್ಲ ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಹಾಗೂ ಶಿವಮೊಗ್ಗ ನಗರ ಬ್ಲಾಕ್ ಕಾಂಗ್ರೆಸ್ ನ ಸಮಿತಿಯ ಪದಾಧಿಕಾರಿಗಳು, ಪಕ್ಷದ ಎಲ್ಲಾ ಮುಖಂಡರು, ವಾರ್ಡ್ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಜಿಲ್ಲಾ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ಕುಮಾರೇಶ್ ತಿಳಿಸಿದ್ದಾರೆ.