ಶಿವಮೊಗ್ಗ, ಸೆ.20:
ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಸಂಜೆ 312 ಕೊರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದ್ದು ಒಟ್ಟು ಪಾಸಿಟಿವ್ ಸಂಖ್ಯೆ 12595 ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.
ಈ ವರದಿಯನುಸಾರ ಓರ್ವರು ಸಾವುಕಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 227 ಕ್ಕೇರಿದೆ.
1331 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದೆ. 992 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ.
ನಿನ್ನೆ 345 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 10650 ಕ್ಕೇರಿದೆ. 213 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 235 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 268 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 1177 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 197 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯಗೊಂಡ ಕೊರೋನ ಪಾಸಿಟಿವ್ ಸಂಖ್ಯೆ 3090 ಎಂದು ಬುಲಿಟಿನ್ ತಿಳಿಸಿದೆ.
ಸೋಂಕಿನ ಹೆಚ್ಚಳದಿಂದಾಗಿ ಕಂಟೈನ್ಮೆಂಟ್ ಜೋನ್ ಗಳು ಸಹ ಹೆಚ್ಚಾಗಿವೆ. ನಿನ್ನೆಯ ವರೆಗೆ 5514 ಕಂಟೈನ್ಮೆಂಟ್ ಜೋನ್ ಗಳಿದ್ದ ಜಿಲ್ಲೆಯಲ್ಲಿ ಇಂದು ಸಹ 5731 ರಷ್ಟೇ ಕಂಟೈನ್ಮೆಂಟ್ ಜೋನ್ ಗಳಿವೆ. 2489 ಡಿನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗಳು 2692 ರಷ್ಟೇ ಇದೆ ಎಂದು ಬುಲಿಟಿನ್ ಪ್ರಕಟಿಸಿವೆ.
ತಾಲೂಕುಗಳ ಮಾಹಿತಿ
ಜಿಲ್ಲೆಯಲ್ಲಿ 312
ಶಿವಮೊಗ್ಗ -141
ಭದ್ರಾವತಿ-68,
ಶಿಕಾರಿಪುರ-49, ತೀರ್ಥಹಳ್ಳಿ-12,
ಸಾಗರ- 11,
ಹೊಸನಗರ-13
ಸೊರಬ- 09
ಇತರೆ ಜಿಲ್ಲೆ- 9 .