ಸಾಗರ, ತಾಲ್ಲೂಕಿನ ಆನಂದಪುರಂ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಂತಿಬೇಧಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ವಾಂತಿಬೇಧಿ ಯಿಂದ 30ಕ್ಕೂ ಹೆಚ್ಚು ಮಕ್ಕಳು ಸಾಲುಸಾಲಾಗಿ ಬಂದು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಿಢೀರನೇ ವಾಂತಿಬೇಧಿ ಕಾಣಿಸಿಕೊಂಡಿರುವುದಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಸಾರ್ವಜ ನಿಕರು ಹೆದರುವ ಅಗತ್ಯವಿಲ್ಲ. ಸಾರ್ವಜನಿಕರು ಮನೆಯಲ್ಲಿ ಕುದಿಸಿ ಆರಿಸಿದ ನೀರು ಉಪಯೋಗಿಸುವ ಜೊತೆಗೆ ಸ್ವಚ್ಚತೆಯನ್ನು ಕಾಯ್ದುಕೊಳ್ಳಲು ವೈದ್ಯರು ಸಲಹೆ ನೀಡಿದ್ದು, ವಾಂತಿಬೇಧಿ ಕಾಣಿಸಿಕೊಂಡವರು ತಕ್ಷಣ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಪಡಲು ಸಲಹೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ವೈದ್ಯ ಡಾ. ಕಾಂತೇಶ್ ಜೆ. ಕುಮಾರ್ ಬೆಳಿಗ್ಗೆಯಿಂದ ಸುಮಾರು ೨೫ಕ್ಕೂ ಹೆಚ್ಚು ಮಕ್ಕಳು ವಾಂತಿಬೇಧಿ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಯಾರಿಗೂ ಗಂಭೀರ ಸ್ವರೂಪ ಕಾಣಿಸಿಕೊಂಡಿಲ್ಲ. ಭಾನುವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ್ದರಿಂದ ಫುಡ್ ಪಾಯಿಸನ್ ಆಗಿರಬಹುದು ಎಂದು ಪ್ರಾಥಮಿಕ ತನಿಖೆ ಯಿಂದ ತಿಳಿದು ಬಂದಿದೆ. ಶುದ್ದವಾದ ನೀರು ಪೂರೈಕೆ ಮಾಡಲು ತಿಳಿಸಲಾಗಿದೆ.