ಓಂ ಶಕ್ತಿ ದೇವಾಲಯ ಟ್ರಸ್ಟ್ ಶಿವಮೊಗ್ಗ ವತಿಯಿಂದ ೧೪ನೇ ವರ್ಷದ ೬೨೫೧ ಇರುಮುಡಿ ಯಾತ್ರೆ ಪ್ರಯುಕ್ತ ಜ.೪ ರಂದು ಬುಧವಾರ ಸಂಜೆ ೪.೩೦ಕ್ಕೆ ವಿನೋಬನಗರದ ಚಂದ್ರಶೇಖರ್ ಆಜಾದ್ ಫ್ರೀಡಂಪಾರ್ಕ್ನಲ್ಲಿ ಲೋಕಕಲ್ಯಾಣಾರ್ಥವಾಗಿ ಓಂ ಶಕ್ತಿ ವೇಲ್ವಿ ಪೂಜೆ (ಹೋಮ) ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳಮುಖಿಯರಿಂದ ಶಕ್ತಿದೇವತೆಗಳ ನೃತ್ಯ ಪ್ರದರ್ಶನವಿರುತ್ತದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳು ವಹಿಸಲಿದ್ದು, ಶಾಸಕ ಕೆ.ಎಸ್.ಈಶ್ವರಪ್ಪ ಗೌರವ ಉಪಸ್ಥಿತಿ ಇರುತ್ತದೆ.

ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಎಸ್.ರುದ್ರೇಗೌಡ ಹಾಗೂ ಎಂಇಎಸ್ಎಂ ಬೆಂಗಳೂರು ಇದರ ಕಾರ್ಯದರ್ಶಿ ಉದಯ್ಕುಮಾರ್, ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮೀ ಶಂಕರ್ನಾಯ್ಕ್, ಸೂಡಾ ಅಧ್ಯಕ್ಷ ಎನ್.ಜೆ.ನಾಗರಾಜ್ ಭಾಗವಹಿಸಲಿದ್ದು, ಓಂ ಶಕ್ತಿ ದೇವಾಲಯ ಟ್ರಸ್ಟ್ನ ಅಧ್ಯಕ್ಷರಾದ ಕೆ.ಈ.ಕಾಂತೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.