: ಜಿಲ್ಲಾ ಜಂಗಮ ಸಮಾಜ ವತಿಯಿಂದ ಸುಮಾರು ೪ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಾಂಸ್ಕೃತಿಕ ಭವನ ಶಿಲಾನ್ಯಾಸ ಸಮಾರಂಭವನ್ನು ಜ.೮ ರಂದು ಸವಳಂಗ ರಸ್ತೆಯಲ್ಲಿರುವ ಕೃಷಿ ಕಾಲೇಜು ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಇರುವ ನಿವೇಶನದಲ್ಲಿ ನಡೆಯಲಿದೆ ಎಂದು ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಲ್.ಲಿಂಗರಾಜ್ ತಿಳಿಸಿದರು.


ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ ೮.೩೦ಕ್ಕೆ ಭೂಮಿ ಪೂಜೆಯ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ೧೦.೩೦ಕ್ಕೆ ನಡೆಯುವ ಸಮಾರಂಭದ ದಿವ್ಯ ಸಾನಿಧ್ಯವನ್ನು ಉಜ್ಜಯಿನಿ ಪೀಠದ ಶ್ರೀ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಾಗವತ್ಪಾದ ಮಹಾಸ್ವಾಮಿ, ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ವಹಿಸಲಿದ್ದಾರೆ ಎಂದರು.


ಮಾಜಿ ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಎಂ.ಪಿ.ರೇಣುಕಾಚಾರ್ಯ, ಬಿ.ಕೆ.ಸಂಗಮೇಶ್ವರ್, ಅಶೋಕ್‌ನಾಯ್ಕ್, ಡಿ.ಎಸ್.ಅರುಣ್, ಮೇಯರ್ ಶಿವಕುಮಾರ್, ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್ ಸೇರಿದಂತೆ ಇನ್ನಿತರರು ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಸಮಾಜದ ಕಾರ್ಯಾಧ್ಯಕ್ಷರಾದ ಎ.ಎಂ.ಚಂದ್ರಯ್ಯ ವಹಿಸಲಿದ್ದಾರೆ ಎಂದರು.


ಪತ್ರಿಕಾಗೋಷ್ಟಿಯಲ್ಲಿ ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಟಿ.ವಿ.ಈಶ್ವರಯ್ಯ, ಪ್ರಮುಖರಾದ ಎ.ಎಂ.ಚಂದ್ರಯ್ಯ, ಟಿ.ಬಿ.ಸೋಮಶೇಖರಯ್ಯ, ಮಹಾಲಿಂಗಯ್ಯ ಶಾಸ್ತ್ರಿ, ಹೆಚ್.ಎಂ.ಲೋಕೇಶ್, ಎಸ್.ರಾಜು, ಸತೀಶ್ ಕುಮಾರ್ ಟಿ.ಹಿರೇಮಠ್, ಕೆ.ಆರ್.ಮೃತ್ಯುಂಜಯ ಸ್ವಾಮಿ, ಪುಟ್ಟಯ್ಯ ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!