ಶಿವಮೊಗ್ಗ, ಜ.07:
ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನೊಬ್ಬನು 06 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.


ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಶ್ರೀ ಲಕ್ಷ್ಮೀಪತಿ, ಪಿಐ, ಹೊಳೆಹೊನ್ನೂರು ಪೊಲೀಸ್ ಠಾಣೆರವರು ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ. ಎಸ್ ರವರು ದಿನಾಂಕ 06-01-2023 ರಂದು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,00,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

By admin

ನಿಮ್ಮದೊಂದು ಉತ್ತರ

error: Content is protected !!