ಶಿವಮೊಗ್ಗ,
ಮೇಲಿನ ಹನಸವಾಡಿ ಮೊರಾರ್ಜಿ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ಊಟದ ನಂತರ ಅಸ್ವಸ್ಥಗೊಂಡ ಸುಮಾರು 92 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಅವರಿಗೆ ಮೆಗಾನ್‌ನಲ್ಲಿ ಚಿಕಿತ್ಸೆ ಕೊಡಿಸಿ ಈಗಾಗಲೇ 70 ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದರು.


ಅವರು ಇಂದು ಬೆಳಗ್ಗೆ ಮೆಗಾನ್‌ಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಮಾತನಾ ಡುತ್ತಾ, ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ 69 ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯದ ಕುರಿತು ವಿಚಾರಿಸಿದ್ದು, ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ತಡವಾಗಿ ದಾಖಲಾದ ವಿದ್ಯಾರ್ಥಿ ಗಳನ್ನು ಇನ್ನು ಸ್ವಲ್ಪ ಕಾಲ ನಿಗಾ ವಹಿಸಿ ಅವರನ್ನೂ ಸಹ ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇದೇ ಸಂದರ್ಭದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜಣ್ಣ ಸಂಕಣ್ಣನವರ್ ಮೆಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.


ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸಮಾರೋಪಾ ದಿಯಲ್ಲಿ ಔಷದೋಪಚಾರ ನೀಡಬೇಕು. ಪೋಷಕರಿಗೆ ವಿಷಯ ತಿಳಿಸಿ ಧೈರ್ಯ ತುಂಬಬೇಕು. .ಮಕ್ಕಳ ಸುಸ್ತು ಮತ್ತು ವಾಂತಿ ಗಮನಿಸಿದಾಗ ಕರುಳು ಕಿತ್ತು ಬರುತ್ತದೆ. ನಗರದ ಅಂಬೇಡ್ಕರ್, ಮೊರಾರ್ಜಿ ದೇಸಾಯಿ ಮತ್ತು ಬಿಸಿಎಂ ಹಾಸ್ಟೆಲ್‌ಗಳ ಆಹಾರದಲ್ಲಿ ವ್ಯತ್ಯಾಸವಾಗಿದ್ದು, ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೂ ಇದರ ಬಗ್ಗೆ ನಿರ್ಲಕ್ಷ್ಯ ತಾಳದೆ ಜಿಲ್ಲಾಧಿಕಾರಿಗಳು ಸೂಕ್ತ ತನಿಖೆ ಮಾಡಬೇಕು ಕಾರಣಕರ್ತರಾದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಇತರೆ ವೈದ್ಯಾಧಿ ಕಾರಿಗಳು, ಅಧಿಕಾರಿಗಳು ಹಾಜರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!