ಶಿವಮೊಗ್ಗ: ಉದ್ಯಮ ಕ್ಷೇತ್ರದಲ್ಲಿ ಗಮನೀಯ ಸಾಧನೆಗಾಗಿ ಶಿವಮೊಗ್ಗ ಮೂಲದ ಪ್ರತಿಷ್ಟಿತ ಉದ್ಯಮಿ – ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕರಾದ ಅಚ್ಚುತ್ ಗೌಡ ಅವರನ್ನು ಬೆಂಗಳೂರಿನಲ್ಲಿ ಇತ್ತೀಚೆಗೆ (೧೮-೦೧-೨೦೨೩) ನಡೆದ “ಯುವ ಸಂಭಾಷಣೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಜೆಪಿ ನಗರದ ಆರ್.ವಿ.ಡೆಂಟಲ್ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪದ್ಮಭೂಷಣ ಪ್ರಶಸ್ತಿ ವಿಜೇತ ಪಂಕಜ್ ಅಡ್ವಾಣಿ, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಎಂ.ಪಿ ಶ್ಯಾಮ್, ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್, ಕಾರ್ಯಕಾರಿಣಿ ಸದಸ್ಯ ಮಾಲತೇಶ್ ಸಿಗಸೆ, ಕೂ ಆಪ್ ಸಹ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ, ಚಿತ್ರನಟಿಯರಾದ ಸಂಜನಾ ಆನಂದ್, ಪ್ರಣಿತಾ ಸುಭಾಷ್ ಮುಂತಾದವರು ಉಪಸ್ಥಿತರಿದ್ದರು.
ತೀರ್ಥಹಳ್ಳಿ ತಾಲೂಕಿನ ಆಲೂರು ಹೊಸಕೊಪ್ಪ ಎಂಬ ಪುಟ್ಟ ಗ್ರಾಮದವರಾದ ಅಚ್ಚುತ್ ಗೌಡ ಅವರು ಮಾನವ ಸಂಪನ್ಮೂಲ ವಿಭಾಗ ಮತ್ತು ಅಂತರಾಷ್ಟ್ರೀಯ ರಿಯಲ್ ಎಸ್ಟೇಟ್ ಸಲಹಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆ, ಗಳಿಸಿರುವ ನೈಪುಣ್ಯ ಅಸದಳ. ಸಾವಿರಾರು ನಿರುದ್ಯೋಗಿಗಳಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ದೊರಕಿಸಿ ಕೊಡುವ ಮೂಲಕ ಅವರು ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!