ಶಿವಮೊಗ್ಗ: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಎಸಿಸಿ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕ ಡಾ. ಸಿರಿವೆಳ್ಳ ಪ್ರಸಾದ್ ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಕಡೆಯಿಂದ ಶಿವಮೊಗ್ಗ ಜಿಲ್ಲೆಗೆ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಎಲ್ಲಾ ೦೭ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮತ್ತು ಸಭೆಗಳನ್ನು ನಡೆಸಿzನೆ. ಟಿಕೆಟ್ ಆಕಾಂಕ್ಷಿಗಳು, ಪಕ್ಷದ ಪ್ರಮುಖರು ಹಾಗೂ ಖಾಸಗಿ ವ್ಯಕ್ತಿಗಳ ಜೊತೆಗೂ ಮಾತುಕತೆ ನಡೆಸಿzನೆ. ಈ ವೇಳೆ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ೦೭ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದು ಕಂಡುಬಂದಿದೆ ಎಂದು ತಿಳಿಸಿದರು.

ಶಿವಮೊಗ್ಗ-ಶಿಕಾರಿಪುರದಲ್ಲೂ ಗೆಲುವು…
ಈ ಬಾರಿ ಜಿಲ್ಲೆಯಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಶಿವಮೊಗ್ಗ-ಶಿಕಾರಿಪುರದಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕಳೆದ ಬಾರಿಯೇ ಶಿಕಾರಿಪುರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ಇರುವುದನ್ನು ಜನರು ನೋಡಿಲ್ಲ. ಹಾಗಾಗಿ ಪಕ್ಷಕ್ಕೆ ಅನುಕೂಲವಾಗಿದೆ. ಫೆಬ್ರವರಿ ೨೦ರೊಳಗೆ ಅಭ್ಯರ್ಥಿಗಳ ಘೋಷಣೆ ಕೂಡ ಆಗಲಿದೆ.
-ಜಿಲಾಧಕ್ಷ ಹೆಚ್.ಎಸ್.ಸುಂದರೇಶ್
ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ಕರ್ನಾಟಕ ಸರ್ಕಾರ ಇತಿಹಾಸ ಸೃಷ್ಟಿ ಮಾಡಿದೆ. ಕಾಂಗ್ರೆಸ್ ಈಗಾಗಲೇ ೪೦ ಪರ್ಸೆಂಟ್ ಸರ್ಕಾರ ಎಂದು ಹೇಳಿರುವುದನ್ನು ಗುತ್ತಿಗೆದಾರರೇ ಬಹಿರಂಗಪಡಿಸುತ್ತಿದ್ದಾರೆ. ಇಷ್ಟು ಭ್ರಷ್ಟ ಸರ್ಕಾರ ಬೇರೆ ಎಲ್ಲಿಯೂ ಇಲ್ಲ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಹಲವು ವೈಫಲ್ಯಗಳನ್ನು ಕಂಡಿದೆ. ಉದ್ಯೋಗ ಸೃಷ್ಟಿ ಮಾಡದೆ ವಂಚಿಸಿದ್ದಾರೆ. ೧೨೦೦ ಕಂಪನಿಗಳು ಬಾಗಿಲು ಹಾಕಿವೆ. ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದು ಆಡಳಿತಾರೂಢ ಸರ್ಕಾರದ ವಿರುದ್ಧ ಅಭಿಪ್ರಾಯ ಮೂಡಿಸಿದೆ ಎಂದರು.
ರಾಜ್ಯದಲ್ಲಿ ೫ ಸಾವಿರ ಕೋಟಿ ರೂ.ಗಳ ಬಿಟ್ ಕಾಯಿನ್ ಹಗರಣ ನಡೆದಿದೆ. ಇದರಲ್ಲಿ ಪ್ರಭಾವಿ ಮಂತ್ರಿಗಳೇ ಭಾಗಿಯಾಗಿದ್ದಾರೆ. ರೈತ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಲಿತರು, ಮಹಿಳೆಯರ ಮೇಲೆ ಶೇ.೨೦ರಷ್ಟು ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ. ಬಿಜೆಪಿ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಇದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ವೈ.ಹೆಚ್.ನಾಗರಾಜ್, ಡಾ.ಶ್ರೀನಿವಾಸ ಕರಿಯಣ್ಣ, ಸಿ.ಎಸ್.ಚಂದ್ರಭೂಪಾಲ್, ದೀಪಕ್ ಸಿಂಗ್, ಚಂದ್ರಶೇಖರ್ ಇದ್ದರು.
