ಕೆ.ಎಸ್.ಓ.ಯು : ಪ್ರಥಮ ವರ್ಷದ ಸ್ನಾತಕೋತ್ತರ/ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, ಜನವರಿ 25;
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು., ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ ದಿನಾಂಕ: 17.01.2023 ರಿಂದ ದಿನಾಂಕ: 31.03.2023 ರ ವರೆಗೆ ಪ್ರಥಮ ವರ್ಷದ ಬಿ.ಎ/ಬಿ.ಕಾಂ/ ಬಿ.ಬಿ.ಎ/ ಬಿ.ಸಿ.ಎ/ ಬಿ.ಎಸ್ಸಿ/ ಬಿ.ಎಲ್,ಐಎಸ್ಸಿ, ಪದವಿ ಹಾಗೂ ಎಂ.ಎ/ಎಂ.ಕಾಂ,/ಎಂ.ಎಲ್,ಐಎಸ್ಸಿ ಮತ್ತು ಎಂ,ಎಸ್‍ಸ್ಸಿ, ಎಂ.ಬಿ.ಎ ಸ್ನಾತಕೋತ್ತರ ಪದವಿ ಹಾಗೂ ಪಿ.ಜಿ ಡಿಪ್ಲೋಮ, ಡಿಪ್ಲೋಮ ಮತ್ತು ಸರ್ಟಿಫಿಕೇಟ್ ಕೋರ್ಸಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ನೇರವಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಭರ್ತಿಮಾಡಿ ಆಲ್ಕೊಳ ಸರ್ಕಲ್ ಹತ್ತಿರ ಇರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ WWW.KSOUMYSURU.AC.IN ಹಾಗೂ ದೂರವಾಣಿ ಸಂಖ್ಯೆ 08182-250367 ಮೊ: 9164467131, 9739803295, 9480765905ಗೆ ಸಂರ್ಪಕಿಸುವುದು.