ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.1ರ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು.
ರೂ.14 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದ್ದು, ಕಡಿಮೆ ಸಿಮೆಂಟ್, ಕಡಿಮೆ ಜೆಲ್ಲಿ ಬಳಸಿ ಕಾಮಗಾರಿ ಮಾಡುತ್ತಿದ್ದಾರೆ ಎಂದು ನಿವಾಸಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ನಿವಾಸಿಗಳಾದ ಶಿವಣ್ಣ, ರವಿ, ಲೋಕೇಶ್, ಕೃಷ್ಣಪ್ಪ, ಮಂಜುನಾಥ್, ಪ್ರದೀಪ ಉಮೇಶ ಸೇರಿದಂತೆ ಹಲವರು ಇದ್ದರು.