ಬೆಂಗಳೂರು.31:

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರೆಯಲಾಗಿದ್ದಂತ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿದೆ.

ಈ ಸಂಬಂಧ ನೂರಾರು ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.

ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು ನ್ಯಾಯಾಲಯದ ಮುಂದೆ ವಾದಿಸಿ, ಪತಿಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಇದು ನಿಯಮ ಬಾಹಿರವಾಗಿದೆ. ಕಾನೂನು ಬಾಹಿರವಾಗಿರುವಂತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿದ್ದರು.

ಇನ್ನೂ ತಂದೆಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ನ್ಯಾಯಪೀಠಕ್ಕೆ ಸೂಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟಿಸಿದ್ದಂತ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!