ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿದ್ದ ಕೋಟ್ಯಾಂತರ ರೂಪಾಯಿಗಳನ್ನು ಕೇಂದ್ರ ಸರ್ಕಾರವು ಪ್ರಧಾನಿ ಮೋದಿ ಆಪ್ತ ಸ್ನೇಹಿತ ಅದಾನಿ ಸಮೂಹದ ಜೊತೆಗೆ ಹೂಡಿಕೆ ಮಾಡಿದ್ದು, ಅತ್ಯಂತ ಅಪಾಯಕಾರಿ ವಹಿವಾಟು ನಡೆಸಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಪ್ರತಿ ಭಟನಾ ಮೆರವಣಿಗೆ ಮತ್ತು ಧರಣಿ ನಡೆಸಲಾಯಿತು.
ರಾಮಣ್ಣ ಶ್ರೇಷ್ಟಿ ಪಾರ್ಕ್ ಮುಂಭಾಗ ದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಗಾಂಧಿ ಬಜಾರ್, ಶಿವಪ್ಪ ನಾಯಕ ಪ್ರತಿಮೆಯಿಂದ ಬಿಹೆಚ್ ರಸ್ತೆ ಯಲ್ಲಿರುವ ಎಸ್.ಬಿ.ಐ.ಮುಖ್ಯ ಶಾಖೆ ಮುಂಭಾಗ ಧರಣಿ ನಡೆಸಲಾಯಿತು.


ಎಲ್‌ಐಸಿಯ ೨೯ ಕೋಟಿ ಪಾಲಿಸಿ ದಾರರು ಮತ್ತು ಎಸ್‌ಬಿಐನ ೪೫ ಕೋಟಿ ಖಾತೆದಾರರು ಕಷ್ಟದಿಂದ ಗಳಿಸಿ ಉಳಿತಾಯ ಮಾಡಿರುವ ಹಣ ಅಪಾಯಕಾರಿಯಾಗಿದೆ. ಅದಾನಿ ಗ್ರೂಪ್‌ನಲ್ಲಿ ಎಲ್‌ಐಸಿ ಭಾರಿ ಹೂಡಿಕೆ ಮಾಡಿದ್ದು ಕಳೆದ ಕೆಲವು ದಿನಗಳಲ್ಲಿ ಎಲ್‌ಐಸಿಯ ೩೯ ಕೋಟಿ ಪಾಲಿಸಿದಾರರು ಮತ್ತು ಹೂಡಿಕೆದಾರರು ೩೩,೦೬೦ ಕೋಟಿ ರೂ. ಕಳೆದುಕೊಂಡಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.
ಅದಾನಿ ಗ್ರೂಪ್‌ಗೆ ಎಸ್‌ಬಿಐ ಮತ್ತು ಇತರೆ ರಾಷ್ಟ್ರೀಕೃತ ಬ್ಯಾಂಕ್‌ಗಳು ನೀಡಿದ್ದ ಭಾರಿ ಮೊತ್ತ ಸುಮಾರು ೮೦ ಸಾವಿರ ಕೋಟಿ ರೂಪಾಯಿಗಳು ವಾಪಸ್ ಮಾಡದೆ ಬಾಕಿ ಉಳಿಸಿಕೊಂಡಿವೆ. ಎಲ್‌ಐಸಿ, ಎಸ್‌ಬಿಐ ಮತ್ತು ಇತರ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಕೆಲವು ಆಯ್ದ ಬಿಲಿಯನೇರ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಬಲವಂತದ ಹೂಡಿಕೆ ಮಾಡಿ ಸಿದೆ. ಕ್ರೋನಿ ಕ್ಯಾಪಿಟಲಿಸಂ ವಿರುದ್ಧವಾಗಿ ಬಿಜೆಪಿ ಸರ್ಕಾರ ರೂಪಿಸಿದ್ದ ನಿಯಮಗಳು ಸಂಸತ್ತಿನಲ್ಲಿ ಚರ್ಚಿಸಬೇಕು ಮತ್ತು ಹೂಡಿಕೆದಾರರನ್ನು ರಕ್ಷಿಸುವಂತ ಸೂಕ್ತ ಕ್ರಮ ಗಳನ್ನು ತಕ್ಷಣ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.


ಎಲ್‌ಐಸಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಳ್ಳುತ್ತಿರುವ ಕಂಪನಿಗಳಲ್ಲಿ ಹೂಡಿಕೆ ಮಾಡುವುದು ತಕ್ಷಣವೇ ಸ್ಥಗಿತಗೊಳಿಸಬೇಕು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ನಿಷ್ಪಕ್ಷಪಾತ ತನಿಖೆ ಅಥವಾ ಜಂಟಿ ಸಂಸದೀಯ ಸಮಿತಿಯಿಂದ (ಜೆಪಿಸಿ) ತನಿಖೆ ನಡೆಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.


ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಮಾಜಿ ಶಾಸಕರಾದ ಆರ್.ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಪಾಲಿಕೆ ಸದಸ್ಯ ಆರ್.ಸಿ.ನಾಯಕ್, ಉತ್ತರ ಬ್ಲಾಕ್ ಅಧ್ಯಕ್ಷ ದೀಪಕ್‌ಸಿಂಗ್, ಮುಖಂಡರಾದ ಇಸ್ಮಾ ಯಿಲ್ ಖಾನ್, ಎಸ್.ಕೆ. ಮರಿಯಪ್ಪ, ಎಲ್.ಸತ್ಯನಾರಾಯಣರಾವ್, ಎಸ್.ಪಿ. ದಿನೇಶ್, ಜಿ.ಡಿ. ಮಂಜುನಾಥ್, ಪಲ್ಲವಿ, ಕೆ.ರಂಗನಾಥ್, ರಮೇಶ್ ಇಕ್ಕೇರಿ, ಹೆಚ್.ಪಿ. ಗಿರೀಶ್, ವಿಜಯಲಕ್ಷ್ಮೀ ಪಾಟೀಲ್, ಎಸ್.ಪಿ. ಶೇಷಾದ್ರಿ ಇನ್ನಿತರರು ಭಾಗವಹಿಸಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!