ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾ ರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕೆಂದು ಆಗ್ರಹಿಸಿ ಇಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.


ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಸಾಕ್ಷಿ ಸಮೇತ ಮಾಡಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ಅಧಿಕಾರಿಗಳು ಬಯಲಿಗೆ ತಂದು ಯಶಸ್ವಿಯಾಗಿದ್ದಾರೆ. ಆದರೆ ಭ್ರಷ್ಟಾಚಾರವನ್ನು ಮಾಡಿರುವ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮುಖ್ಯಮಂತ್ರಿಗಳ ಬಳಿ ಬಂದು ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬಂದಾಗಲೆ ಬಂಧಿಸಬಹು ದಾಗಿತ್ತು. ಆದರೆ ತಲೆಮರೆಸಿಕೊಳ್ಳಲು ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


ಈ ಮೂಲಕ ರಾಜ್ಯ ಸರ್ಕಾರವೆ ಭ್ರಷ್ಟಾಚಾರದಲ್ಲಿ ಶಾಮೀಲಾಗಿರುವುದು ಬಹಿರಂಗವಾಗಿದೆ. ಆದ್ದರಿಂದ ಕೂಡಲೆ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತರಬೇಕು

ಹಾಗೂ ತಲೆಮರೆಸಿ ಕೊಂಡಿರುವ ಮಾಡಾಳ್ ವಿರುಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕುಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರಾದ ಬಿ.ಆರ್.ಮನೋಹರಗೌಡ, ಆರ್.ಎಸ್.ನವಿಲೇಶ್, ಗುಜ್ಜಾರ್‌ಖಾನ್, ಸೂರ್ಯಬಾಬು, ಸುರೇಶ್ ಕೌಟೇ ಕಾರ್, ಹರೀಶ್, ನಿಂಗರಾಜ್, ಟಿ.ರಾಮಕೃಷ್ಣ, ಆರ್.ಲಿಂಗರಾಜು, ರಾಜೀವ್ ಕೌಟೇಕಾರ್ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!