ನವದೆಹಲಿ : ಕೇಂದ್ರ ಗೃಹ ಸಚಿವಾಲಯ (ಎಂಎಚ್ ಎ) ಇಂದು ಅಕ್ಟೋಬರ್ 1ರಿಂದ ಜಾರಿಯಾಗುವಂತೆ ಅನ್ ಲಾಕ್ 5.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ನೂತನ ಅನ್ ಲಾಕ್ 5.0 ಮಾರ್ಗಸೂಚಿಯಂತೆ ಅಕ್ಟೋಬರ್ 15ರಿಂದ ಸಿನಿಮಾ ಥಿಯೇಟರ್, ಮಲ್ಟಿಫ್ಲೆಕ್ಸ್ ಥಿಯೇಟರ್, ಚಿತ್ರ ಮಂದಿರಗಳನ್ನು ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಆರಂಭಿಸಲು ಅನುಮತಿಸಿದೆ. ಅಲ್ಲದೇ ಸ್ವಿಮ್ಮಿಂಗ್ ಪೂಲ್ ಗಳನ್ನು ಸಹ ತೆರೆಯಲು ಅನುಮತಿಸಿದೆ. ಆದ್ರೇ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವುದು ಕಡ್ಡಾಯಗೊಳಿಸಿದೆ. ಈ ಕುರಿತಂತೆ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಗೃಹ ಸಚಿವಾಲಯವು, ಅಕ್ಟೋಬರ್ 15ರಿಂದ ಚಿತ್ರಮಂದಿರಗಳು, ಥಿಯೇಟರ್ ಗಳು ಮತ್ತು ಮಲ್ಟಿಪ್ಲೆಕ್ಸ್ ಗಳಲ್ಲಿ ತಮ್ಮ ಸಾಮರ್ಥ್ಯದ ಶೇ. 50ರಷ್ಟು ಪ್ರೇಕ್ಷಕರನ್ನು ಹೊಂದಿರುವಂತೆ ಆಸನಗಳನ್ನು ಭರ್ತಿ ಮಾಡಿಕೊಂಡು, ತೆರೆಯಲು ಅನುಮತಿಯನ್ನು ನೀಡಲಾಗಿದೆ.

ಶಾಲೆ ಆರಂಭದ ಯೋಚನೆ ಅ.15 ರ ನಂತರ

ಶಾಲೆಗಳು ಮತ್ತು ಕೋಚಿಂಗ್ ಸಂಸ್ಥೆಗಳನ್ನು ಪುನಃ ತೆರೆಯುವುದಕ್ಕೆ ಸಂಬಂಧಿಸಿದಂತೆ, 2020ರ ಅಕ್ಟೋಬರ್ 15ರ ನಂತರ ರಾಜ್ಯ ಸರ್ಕಾರಗಳು ಪೋಷಕರು, ಶಿಕ್ಷಣ ಸಂಸ್ಥೆಗಳೊಂದಿಗೆ ಚರ್ಚಿಸಿ ತೆರೆಯಲು ಅವಕಾಶ ನೀಡಿದೆ. ಈ ಮೂಲಕ ಶಾಲಾ-ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರಗಳ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಿಟ್ಟಿದೆ. ಹೀಗಾಗಿ ಅಕ್ಟೋಬರ್ 15ರವರೆಗೆ ದೇಶಾದ್ಯಂತ ಶಾಲಾ-ಕಾಲೇಜು ತೆರೆಯುವ ಸಂಬಂಧ ರಾಜ್ಯ ಸರ್ಕಾರಗಳು ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವ ಬಗ್ಗೆ ಕಾದು ನೋಡಬೇಕಿದೆ.

By admin

ನಿಮ್ಮದೊಂದು ಉತ್ತರ

error: Content is protected !!