ಶಿವಮೊಗ್ಗ.ಮಾ.೮: ಲಂಚದ ಆರೋಪ ಹೊತ್ತಿರುವ ಮಾಡಾಳ್ ವಿರೂಪಾಕ್ಷಪ್ಪನವರ ವಿರುದ್ಧ ನಾಳೆ ಕರೆನೀಡಿದ್ದ ಬಂದ್ ಅನ್ನು ಕೆಪಿಸಿಸಿಯ ನಿರ್ದೇಶನದ ಮೇರೆಗೆ ರದ್ದುಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.


ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡಲು ಹೊರಟಿದೆ. ಈ ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಾಗಲೂ ಅದಕ್ಕೆ ಕಾರಣರಾದವರಿಗೆ ಕ್ಲೀನ್‌ಚಿಟ್ ನೀಡಲಾಗಿತ್ತು. ಈಗ ಬಂಧನದ ಭೀತಿಯಲ್ಲಿದ್ದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಇದರ ಹಿಂದೆ ಬಿಜೆಪಿ ಸರ್ಕಾರದ ಪ್ರಭಾವವಿದೆ. ಭ್ರಷ್ಟಾಚಾರವನ್ನು ಮುಚ್ಚಿಹಾಕುವ, ರಕ್ಷಿಸುವ ಕೆಲಸವನ್ನು ಮುಖ್ಯಮಂತ್ರಿ ಸೇರಿದಂತೆ ಸರ್ಕಾರ ಮಾಡುತ್ತಿದೆ ಎಂದರು.


ಮಾಡಾಳ್ ವಿರೂಪಾಕ್ಷಪ್ಪನವರನ್ನು ಬಂಧಿಸಲು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಬಂದ್‌ಗೆ ಕರೆನೀಡಿತ್ತು. ಆದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ತೊಂದರೆಯಾಗಬಾರದು ಎಂದು ಈ ಬಂದ್ ಕೈಬಿಡಲಾಗಿದೆ. ಆದರೆ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ತನ್ನ ಹೋರಾಟವನ್ನು ಮುಂದುವರಿಸುತ್ತದೆ ಎಂದರು.

ರಣದೀಪ್ ಸಿಂಗ್ ಸುರ್ಜೆವಾಲಾ ಆಗಮನ:
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾ.೧೦ರಂದು ಶಿವಮೊಗ್ಗಕ್ಕೆ ಬರಲಿದ್ದು, ಅವರು ಬೆಳಿಗ್ಗೆ ೧೦ ಗಂಟೆಗೆ ಲಗಾನ್ ಕಲ್ಯಾಣ ಮಂದಿರದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಕಾಂಗ್ರೆಸ್ ಪಕ್ಷದ ಜನಪ್ರಿಯ ಘೋಷಣೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಹಾಗೂ ಉಚಿತ ಅಕ್ಕಿ ವಿತರಣೆ ಸೇರಿದಂತೆ ಇತರ ಯೋಜನೆಗಳ ಕುರಿತು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದರು.


ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಡಾ. ಸಿರಿವೆಳ್ಳ ಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಉಪಾಧ್ಯಕ್ಷ ಹೆಚ್.ಎಂ ರೇವಣ್ಣ ಹಾಗೂ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಪ್ರಚಾರ ಸಮಿತಿಯ ಪ್ರಮುಖರು ಆಕಾಂಕ್ಷಿ ಅಭ್ಯರ್ಥಿಗಳು ಎಲ್ಲಾ ಸೆಲ್‌ಗಳ ಮಹಿಳಾ ಘಟಕಗಳ ಮುಖ್ಯಸ್ಥರು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್. ರಮೇಶ್, ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಆರ್. ಪ್ರಸನ್ನಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ, ಪ್ರಮುಖರಾದ ಎಲ್. ಸತ್ಯನಾರಾಯಣ ರಾವ್, ಎಸ್.ಕೆ. ಮರಿಯಪ್ಪ, ದೀಪಕ್ ಸಿಂಗ್, ಮೆಹಕ್ ಷರೀಫ್, ಟಿ.ಕೃಷ್ಣಪ್ಪ, ಯು.ಶಿವಾನಂದ, ಸಿ.ಎಸ್. ಚಂದ್ರ ಭೂಪಾಲ್ ಇನ್ನಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!