ಶಿಕಾರಿಪುರದಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆಹಾಕಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಇಂದು ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದರು.

ಸಂಸದ ಬಿ.ವೈ. ರಾಘವೇಂದ್ರ ಮತ್ತು ಎಸ್ಪಿ ಮಿಥುನ್ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ತಪ್ಪು ಮಾಡಿದ ಯಾರನ್ನೂ ಬಿಡಲಾಗು ವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಶಿಕಾರಿಪುರದ ಘಟನೆ ಅತ್ಯಂತ ದುರದೃ ಷ್ಟಕರ. ಕೆಲವರ ತಪ್ಪು ತಿಳುವಳಿಕೆ, ಪ್ರಚೋದನೆಯಿಂದ ಈ ಘಟನೆಯಾಗಿದ್ದು, ಈ ಕಾರಣಕ್ಕಾಗಿಯೇ ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆ ಮೇಲೆ ದಾಳಿಯಾಗಿದೆ ಎಂದು ಹೇಳಿದರು.

ಬಂಜಾರ ಜನಾಂಗದವರ ಅಭಿವೃದ್ಧಿ ಮಾಡಿದ ವರು ಯಡಿಯೂರಪ್ಪನವರು. ಸೂರಗೊಂಡನಕೊಪ್ಪ ಮತ್ತು ಅಭಿವೃದ್ಧಿ ನಿಗಮ ಸ್ಥಾಪಿಸಿದ್ದರು. ಜನಾಂಗದ ಎಲ್ಲಾ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. ಅವರ ಮೇಲೆ ಆಕ್ಷನ್ ತೆಗೆದುಕೊ ಳ್ಳಬೇಡಿ ಎಂದು ಯಡಿಯೂರಪ್ಪ ಹೇಳಿದ್ದಾರೆ. ತಪ್ಪು ತಿಳುವಳಿಕೆಯಿಂದ ಈ ರೀತಿ ಮಾಡಿದ್ದಾರೆ.ನಾನು ಅವರ ಜೊತೆ ಮಾತಾಡ್ತಿನಿ ಎಂದು ಹೇಳಿದ್ದಾರೆ. ಘಟನೆಯಲ್ಲಿ ನಮ್ಮ ಪೊಲೀಸರ ಮೇಲೂ ಹಲ್ಲೆಯಾಗಿದ್ದು ನನಗೆ ನೋವಾಗಿದೆ ಎಂದರು.


ಘಟನೆಯಲ್ಲಿ ಗಾಯಗೊಂಡಿರುವ ೨-೩ ಪೊಲೀಸರು ಆಸ್ಪತ್ರೆಯಲ್ಲಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಕಾನೂನು ಕೈಗೆತ್ತಿಕೊಂಡಿದ್ದಾರೆ. ಆದರೆ ಘಟನೆಯನ್ನು ಪೊಲೀಸರು ನಿಯಂತ್ರಣಕ್ಕೆ ತಂದಿದ್ದಾರೆ. ಶಿಕಾರಿಪುರದಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪೊಲೀಸರು ತಾಳ್ಮೆ ವಹಿಸಿದ್ದಕ್ಕೆ ಪೆಟ್ಟು ತಿನ್ನುವಂತಾಗಿದೆ. ಹೀಗಿದ್ದರೂ ಬೇಗ ನಿಯಂತ್ರಣಕ್ಕೆ ನಮ್ಮ ಪೊಲೀಸರು ತಂದಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆದಿದೆ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.



ಉದ್ದೇಶಪೂರ್ವಕವಾಗಿ ದಾಳಿ ನಡೆದಿರುವುದು ನಮಗೆ ಕಂಡುಬಂದಿದೆಚುನಾವಣೆಯಲ್ಲಿ ಬೇಳೆ ಬೇಯಿಸಿಕೊಳ್ಳೋಕೆ ಕೆಲ ಪಕ್ಷದವರು ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.
ಪೊಲೀಸರ ತನಿಖೆಯಿಂದ ಇದು ಹೊರಬರಲಿದೆ. ೪-೫ ಕೇಸು ಇದ್ದವರು ಸಹ ನಿನ್ನೆಯ ಘಟನೆಯಲ್ಲಿ ಭಾಗಿಯಾಗಿದ್ದರು. ಅಮಾಯಕರನ್ನು ಪ್ರಚೋದನೆ ಮಾಡಿ ಗಲಾಟೆ ಮಾಡಿಸಿದ್ದಾರೆ. ಯಾರಿಗಾದರೂ ತಾಲೂಕು ಕಚೇರಿಗೆ ಬಂದು ಮನವಿ ಸಲ್ಲಿಸಲು ಅವಕಾಶ ಇರುತ್ತದೆ. ಆದರೆ, ಈ ರೀತಿ ಘಟನೆ ನಡೆಯಬಾರದು ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
.