ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಇಂದು ಎನ್ಎಸ್ಯುಐ ವತಿಯಿಂದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ಹೊರಬಿದ್ದೊಡನೆ, ತೀರ್ಪಿನಲ್ಲಿ ಮೇಲ್ಮನವಿಗೆ ಅವಕಾಶವಿದ್ದರೂ ಆದೇಶದ ಪ್ರತಿ ಕೈಗೆ ಸಿಗುವ ಮೊದಲೇ ಕಾಂಗ್ರೆಸ್ನ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿದರು.

ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿ ನಿಂದಲೂ ಸಂವಿಧಾನ ವಿರೋಧಿ ನೀತಿ ಅನು ಸರಿಸುತ್ತಾ ದ್ವೇಷದ ರಾಜಕಾರಣ ಮಾಡುತ್ತಿದೆ. ಆ ಮೂಲಕ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕ ತಂದೊಡ್ಡುತ್ತಿದೆ.
ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಂದಿನ ಪ್ರಧಾನಿ ಅಭ್ಯರ್ಥಿ. ಅವರನ್ನು ರಾಜಕೀಯವಾಗಿ ಮುಗಿ ಸುವ ಸಂಚಿನಿಂದಾಗಿ ಬಿಜೆಪಿ ಅವರಿಗೆ ಮೇಲ್ಮ ನವಿ ಸಲ್ಲಿಸಲು ಅವಕಾಶವಿದ್ದಾಗಲೂ ತರಾತುರಿ ಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊ ಳಿಸಿದೆ. ಇದು ಖಂಡನೀಯ ಎಂದರು.

ಮೋದಿಗಳ ವಿರುದ್ಧ ರಾಹುಲ್ ಮಾತನಾ ಡಿದ್ದು ಒಬಿಸಿಗಳಿಗೆ ಅವಮಾನ ಎಂದು ಬಿಜೆಪಿಯವರು ಹೇಳುತ್ತಾರೆ. ನೀರವ್ ಮೋದಿ ಒಬಿಸಿಗೆ ಸೇರಿದವನೇ? ಲಲಿತ್ ಮೋದಿ, ಮೆಹುಲ್ ಚೋಕ್ಸಿ ಒಬಿಸಿಯೇ? ಅವರು ದೇಶದ ಜನರ ಹಣದೊಂದಿಗೆ ಪರಾರಿಯಾಗಿ ದ್ದಾರೆ. ಅಂತಹ ದೇಶಭ್ರಷ್ಟರನ್ನು ಟೀಕಿಸಿದರೆ ಬಿಜೆಪಿಗೆ ನೋವಾಗುತ್ತದೆ. ದೇಶ ಉಳಿಸಲು ಕೆಲಸ ಮಾಡಿದವರನ್ನು ಬಿಜೆಪಿ ಶಿಕ್ಷಿಸುತ್ತದೆ. ದೇಶದ ಹಣ ಲೂಟಿ ಮಾಡಿದವರನ್ನು ವಿದೇಶಕ್ಕೆ ಕಳಿಸುತ್ತಾರೆ. ಗಾಂಧಿ ಕುಟುಂಬದ ರಕ್ತ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಪೋಷಿಸಿದೆ. ನಾವು ದೇಶದ ಪ್ರಜಾಪ್ರಭುತ್ವಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ. ಈ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದವರು ಕಾಂಗ್ರೆಸ್ನ ಮಹಾನ್ ನಾಯಕರು. ದೇಶದ ಏಕತೆಗಾಗಿ ಸಾವಿರಾರು ಕಿಲೋಮೀಟರ್ ನಡೆದ ಹಾಗೂ ಹುತಾತ್ಮ ಪ್ರಧಾನಿಯ ಮಗ ಯಾವತ್ತೂ ಈ ದೇಶಕ್ಕೆ ಅವಮಾನ ಮಾಡುವುದಿಲ್ಲ ಎಂದರು.

ಕೂಡಲೇ ಅನರ್ಹಗೊಳಿಸಿರುವುದನ್ನು ವಾಪಾಸು ಪಡೆಯಬೇಕು. ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ರಾಹುಲ್ ಗಾಂಧಿ ಅವರ ಅನರ್ಹತೆ ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.



ಪ್ರತಿಭಟನೆಯಲ್ಲಿ ಎನ್ಎಸ್ಯುಐ ಪ್ರಮುಖರಾದ ರವಿ ಕಾಟಿಕೆರೆ, ಚರಣ, ಹರ್ಷಿತ್, ವಿಜಯಕುಮಾರ್ ಎಸ್.ಎನ್., ರವಿಕುಮಾರ್, ಚಂದ್ರೋಜಿರಾವ್, ತೌಫಿಕ್, ಬಸವರಾಜ್ ಪ್ರಮೋದ್, ಸಮರ್ಥಗೌಡ, ಅಭಿಷೇಕ್, ವರುಣ್, ಕುಮಾರ್, ಉಲ್ಲಾಸ್, ಪ್ರದೀಪ್, ಸಾಗರ್, ದೀಪು, ಅನಂತ, ಅಶೋಕ್, ಯೋಗೇಶ್, ಕಾರ್ತಿಕ್, ಮಧು ನಿಖಿಲ್ ಮತ್ತಿತರರು ಪಾಲ್ಗೊಂಡಿದ್ದರು.