ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಅರಿತು ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿವೃತ್ತ ಸಹಾಯಕ ಸಬ್ಇನ್ಸ್ಪೆಕ್ಟರ್ ಎಂ.ದಾನಂ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು ಇಲಾಖೆ ಮಾತ್ರವಲ್ಲದೆ ಎಲ್ಲೆಡೆಯಲ್ಲಿಯೂ ಗೌರವಕ್ಕೆ ಪಾತ್ರರಾಗುತ್ತಾರೆ ಎಂದರು.
ಹಿರಿಯ ಅಧಿಕಾರಿಗಳ ಸಲಹೆ ಮತ್ತು ಮಾರ್ಗ ದರ್ಶನದಿಂದ ಸಿಬ್ಬಂದಿ ಸಹಕಾರದಿಂದ ನಿರ್ವಹಿಸಿದ ಕಾರ್ಯಗಳಿಗಾಗಿ ಹಲವು ಪುರಸ್ಕಾರ ಲಭಿಸಿರುವುದು ನನಗೆ ಅತೀವ ಸಂತಸ ತಂದಿದೆ’ ಎಂದರು.
ಇಲಾಖೆಯ ಎಲ್ಲಾ ಹಂತದ ಅಧಿಕಾರಿ, ಸಿಬ್ಬಂದಿ ಕರ್ತವ್ಯದಲ್ಲಿ ನಿಷ್ಠೆ, ಶಿಸ್ತು, ಬದ್ಧತೆಯೊಂಡಿಗೆ ವೃತ್ತಿಪರತೆ ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದ ಅವರು, ’ಸಿಬ್ಬಂದಿ ಸೂಕ್ತ ತರಬೇತಿ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಉತ್ತಮವಾಗಿ ಸೇವೆ ಸಲ್ಲಿಸಿ, ನಿರೀಕ್ಷೆಯಂತೆ ಕಾರ್ಯನಿರ್ವಹಿಸಿ. ಜನರಲ್ಲಿ ಸಂಚಾರ ನಿಯಮಗಳ ಅರಿವು ಮೂಡಿಸ ಬೇಕಾದ ಅಗತ್ಯವಿದೆ’ ಎಂದರು.
ಪೊಲೀಸ್ ನಿಧಿಯಿಂದ ಜಿಲ್ಲೆಯಲ್ಲಿ ನಿವೃತ್ತಿ ಜೀವನ ಸಾಗಿಸುತ್ತಿರುವ ಹಾಗೂ ಅನಾರೋಗ್ಯದಲ್ಲಿರುವ ೬೬ ಜನರಿಗೆ ೨ ಲಕ್ಷಕ್ಕೂ ಹೆಚ್ಚಿನ ಧನಸಹಾಯ ಮಾಡಲಾಗಿದೆ. ೧೩ ಪೊಲೀಸ್ ಕುಟುಂಬಗಳಿಗೆ ? ೧.೩೦ ಲಕ್ಷ ಹಣ ನೀಡಿ ಸಹಕರಿಸಲಾಗಿದೆ. ಪೊಲೀಸ್ ಕುಟುಂಬಗಳ ಕಲ್ಯಾಣ ಕಾರ್ಯಕ್ರಮ ಆಯೋಜಿಸ ಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲಕುಮಾರ ಭೂಮರಡ್ಡಿ, ಪೊಲೀಸ್ ಅಧಿಕಾರಿಗಳು ಇದ್ದರು.