ಶಿವಮೊಗ್ಗ,ಏ.11: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಈ ಕೆಳಕಂಡ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ 30,64,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಅದೂ ಒಂದೇ ದಿನದಲ್ಲಿ ಸಿಕ್ಕಿದೆ.
1) ದಿನಾಂಕಃ 10-04-2023 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 27,60,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
2) ದಿನಾಂಕಃ 10-04-2023 ರಂದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,79,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
3) ದಿನಾಂಕಃ 10-04-2023 ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,25,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.