ಕೊನೆಯ ಕ್ಷಣದಲ್ಲಿ ಟಿಕೆಟ್ ಗಿಟ್ಟಿಸಿ ಕೊಂಡ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.


ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಸಂಖ್ಯೆಯಲ್ಲಿದ್ದ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆಗೆ ಮೆರವಣಿಗೆಯಲ್ಲಿ ಸಾಗಿದರು. ಘೋಷಣೆಗಳನ್ನು ಕೂಗುತ್ತಾ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.


ಇದಕ್ಕೂ ಮುನ್ನ ಅವರು ತಮ್ಮ ನಾಯಕ ಕೆ.ಎಸ್. ಈಶ್ವರಪ್ಪನವರ ಮನೆಗೆ ತೆರಳಿ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಚೆನ್ನಬಸಪ್ಪ ಅವರನ್ನು ಪ್ರೀತಿಯಿಂದ ತಬ್ಬಿ ನೀನು ಗೆದ್ದೇ ಗೆಲ್ಲುತ್ತೀಯಾ ಯಾವ ಆತಂಕವೂ ಬೇಡ ಎಂದು ಈಶ್ವರಪ್ಪ ವಿಶ್ವಾಸ ತುಂಬಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿ ತಕ್ಕೆ ಬಂದೇ ಬರುತ್ತದೆ.

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಯನ್ನು ಗೆಲ್ಲಿಸುವುದೇ ನಮ್ಮ ಗುರಿ ಯಾಗಿದೆ. ಬಿಜೆಪಿಯಲ್ಲಿ ಕಾರ್ಯಕರ್ತರು, ಜವಾಬ್ದಾರಿ ಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.
ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಹಿರಿಯರಾದ ಈಶ್ಪರಪ್ಪನವರ ಮಾರ್ಗದರ್ಶನದಲ್ಲಿಯೇ ಈ ಚುನಾವ ಣೆಯನ್ನು ನಡೆಸುತ್ತೇನೆ. ಕಾರ್ಯಕರ್ತರೆಲ್ಲ ಉತ್ಸಾಹದಿಂದ ಇದ್ದಾರೆ. ಈಶ್ವರಪ್ಪನವರಿಗೆ ಹೇಗೆ ಗೆಲ್ಲಬೇಕೆಂಬುದು ಕರಗತವಾಗಿದೆ. ಅವರ ಹಾದಿಯಲ್ಲೆ ಸಾಗುತ್ತೇನೆ. ಸುಮಾರು ೬೦ ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಭಾರಿ ಜೆಡಿಎಸ್‌ಗೆ ಅತಿ ಹೆಚ್ಚಿನ ಸ್ಥಾನಗಳು ಲಭಿಸಲಿದ್ದು, ಬರುವ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ಮತ್ತೆ ಕುಮಾರಸ್ವಾಮಿ ನೇಮಕವಾಗಲಿದ್ದಾರೆ. ಅದಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಕರ್ತವ್ಯ ನಿರ್ವಹಿಸುವುದು ಅಗತ್ಯವಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು.


ಅವರು ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸುವ ಪೂರ್ವದಲ್ಲಿ ನಡೆದ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ನಾನು ನನ್ನ ರಾಜಕೀಯ ಜೀವನವನ್ನು ಆರಂಭಿಸಿದ್ದು, ಇದೇ ಜಿಲ್ಲಾ ಜನತಾದಳದ ಕಟ್ಟಡದಲ್ಲಿ. ಹಾಗೂ ಶಿವಮೊಗ್ಗ ಜಿಲ್ಲಾ ಯುವ ಜನತಾದಳದ ಮೊಟ್ಟ ಮೊದಲ ಅಧ್ಯಕ್ಷ ನಾಗಿ ಕರ್ತವ್ಯ ನಿರ್ವಹಿಸಿದ್ದೆ ಎಂದ ಅವರು ಹಳೆಯ ನೆನಪುಗಳನ್ನು ಸ್ಮರಿಸಿದರು.
ಶಿವಮೊಗ್ಗ ನಗರ, ಗ್ರಾಮಾಂತರ ಹಾಗೂ ಭದ್ರಾವತಿಯಲ್ಲಿ ನಮ್ಮ ಪಕ್ಷ ಅತಿ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತದೆ. ಶಿವಮೊಗ್ಗ ನಗರದ ಜನ ಶಾಂತವಾಗಿ ಬದುಕಬೇಕೆಂಬ ಸದುದ್ದೇಶದಿಂದ ಈ ಭಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ನಗರದ ಎಲ್ಲಾ ವಿದ್ಯಾವಂತರ ಸಮೂಹ (ಸರ್ಕಾರಿ ನೌಕರರು, ವಿಶೇಷವಾಗಿ ಕಾರ್ಮಿಕರು, ಬಡ ಕುಟುಂಬದವರು ಕುಮಾರಸ್ವಾಮಿ ಅವರನ್ನು ಹಾಗೂ ನನ್ನನ್ನು ಪ್ರೀತಿಸುತ್ತಾರೆ. ಹಾಗಾಗೀ ಖಡಖಂಡಿತ ಗೆಲುವು ನನ್ನದು ಎಂದರು.


ಕಾರ್ಯಕರ್ತರು ನಿಜವಾದ ಜೀವಾಳ ಪ್ರತಿ ಬೂತ್‌ಮಟ್ಟದಲ್ಲಿ ಪಕ್ಷಕ್ಕೆ ಕೊಡಿಸುವ ಮತಗಳ ಆಧಾರದಲ್ಲಿ ಗಣನೆಗೆ ತೆಗೆದುಕೊಂಡು ಹೆಚ್ಚು ಮತ ಕೊಡಿಸಿದವರಿಗೆ ಸನ್ಮಾನಿಸುವ ಜೊತೆಗೆ ಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಅವರಿಗೆ ಅದ್ಯತೆ ನೀಡಿ ಅವರನ್ನು ಗೆಲ್ಲಿಸಿ ತರುವ ಹೊಣೆಗಾರಿಕೆ ನಮ್ಮದಾಗಿದೆ ಎಂದು ಹೇಳಿದರು.
ಪಕ್ಷಕ್ಕೆ ನಾನು ಬರಲು ಶ್ರೀಕಾಂತ್ ಅವರ ಪ್ರಯತ್ನ ದೊಡ್ಡದು. ನಿನ್ನೆ ನೀಲಕಂಠೇಶ್ವರ ದೇವಾಲಯದಲ್ಲಿ ಕುಮಾರಸ್ವಾಮಿ ಅವರು ಶುಭ ಹರಿಸಿ ಶ್ರೀಕಾಂತ್ ನೇತೃತ್ವದಲ್ಲಿ ನನಗೆ ಬಿ ಫಾಂ ನೀಡಿದ್ದಾರೆ ಇದು ಈ ವರುಷದ ಜೆಡಿಎಸ್ ಪಕ್ಷದ ಹೊಸ ಇತಿಹಾಸಕ್ಕೆ ಆರಂಭವಾಗಿದೆ. ಸರ್ಕಾರ ರಚಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್, ಮಾಜಿ ಶಾಸಕಿ ಹಾಗೂ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಶಾರಾದ ಪೂರ‍್ಯಾನಾಯ್ಕ್, ಪ್ರಮುಖರಾದ ಹೆಚ್.ವಿ.ಮಹೇಶ್ವರಪ್ಪ, ಪರಂಧಾಮರೆಡ್ಡಿ, ಚಾಬೂಸಾಬ್, ಶಾಂತಸುರೇಂದ್ರ, ಗೀತಾ ಸುರೇಶ್, ಬಾಸ್ಕರ್, ಸಿದ್ದಪ್ಪ, ಮೊಹಮ್ಮದ್ ಯೂಸಫ್, ಗೋವಿಂದಪ್ಪ, ನಾಗರಾಜ್ ಕಂಕಾರಿ, ಸತ್ಯನಾರಾಯಣ, ಪಾಲಾಕ್ಷಿ ಹಾಗೂ ಇತರರು ವೇದಿಕೆಯಲ್ಲಿದ್ದರು.

.ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್.ಸಿ. ಯೋಗೀಶ್ ಇಂದು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.


ರಾಮಣ್ಣ ಶ್ರೇಷ್ಠಿ ಪಾರ್ಕಿನ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಅಪಾರ ಬೆಂಬಲಿಗರೊಂದಿಗೆ ದೇವಸ್ಥಾನದಿಂದ ಗಾಂಧಿಬಜಾರ್, ಶಿವಪ್ಪನಾಯಕ ಪುತ್ಥಳಿ, ನೆಹರು ರಸ್ತೆ, ಗೋಪಿ ಸರ್ಕಲ್, ಕಸ್ತೂರಬಾ ಕಾಲೇಜು ರಸ್ತೆ ಮೂಲಕ ಸಾಗಿ ಮಹಾನಗರ ಪಾಲಿಕೆಯಲ್ಲಿರುವ ಚುನಾವಣಾ ಅಧಿಕಾರಿ ಗಳಿಗೆ ನಾಮಪತ್ರ ಸಲ್ಲಿಸಿದರು

.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿ ದರು.


ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಬಿಜೆಪಿ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಹೊಸತನ ಬಯಸಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸದಲಿದ್ದಾರೆ. ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!