ಶಿವಮೊಗ್ಗ,ಏ.29:
ಕಳೆದ 2020ರ ಸಾಲಿನಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 23 ವರ್ಷದ ಯುವಕನೊಬ್ಬನು, 20 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು, ನೊಂದ ಯುವತಿಯು ನೀಡಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿರುತ್ತದೆ.
ತನಿಖಾಧಿಕಾರಿಗಳಾದ ಪ್ರವೀಣ್ ನೀಲಮ್ಮ ನವರ್, ಸಿಪಿಐ ಮಾಳೂರು ವೃತ್ತ ರವರು ಪ್ರಕರಣದ ತನಿಖೆ ಪೂರೈಸಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಮಲ್ಲಿಕಾರ್ಜುನ ಗೌಡ ಮಾನ್ಯ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ರವರು ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ *ಆರೋಪಿತನಿಗೆ 04 ವರ್ಷಗಳ ಕಾಲ ಸಾದಾ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.