ಮೇ.೦4ರಂದು ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳಿಗೆ ೨ನೇ ಹಂತದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ ೧೦೮ ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಆದ್ದರಿಂದ ಮೇ-೦೪ ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ
ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.