close up of hands of business person working on computer, man using internet and social media
ಶಿವಮೊಗ್ಗ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯವರು ಚಿತ್ರದುರ್ಗದಲ್ಲಿ ನಡೆಸುತ್ತಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಮೇ-೦೫ರಂದು ಮ.೦೧ ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆ

ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: ೦೮೧೮೨-೨೨೦೯೨೫ ನ್ನು ಸಂಪರ್ಕಿಸುವುದು.