ಶಿವಮೊಗ್ಗ : ಭಜರಂಗದಳದಂತಹ ದೇಶಭಕ್ತ ಸಂಘಟನೆಯನ್ನು ನಿಷೇಧಿಸುವ ಮಾತನ್ನು ಕಾಂಗ್ರೆಸ್ ಹೇಳಿದೆ. ಈ ಸಂಘಟನೆ ದೇಶಭಕ್ತ ಸಂಘಟನೆ. ಕೇವಲ ಕರ್ನಾಟಕದಲ್ಲಿ ಮಾತ್ರವಿಲ್ಲ, ಹಲವು ರಾಜ್ಯಲ್ಲಿದೆ. ಇದನ್ನು ನಿಷೇಧಿಸುವ ಮಾತು ಹಾಸ್ಯಾಸ್ಪದವಾದುದು ಎಂದು ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದರು.

ಅವರು ಇಂದು ಸಂವಾದದಲ್ಲಿ ಮಾತನಾಡುತ್ತಾ, ಕಾಂಗ್ರೆಸ್‍ಗೆ ಚುನಾವಣಾ ದಿನ ಹತ್ತಿರ ಬರುತ್ತಿರುವಂತೆಯೇ ವೀರಶೈವರ ಬಗ್ಗೆ ಅನುಕಂಪ ಶುರುವಾಗಿದೆ ಎಂದು ಲೇವಡಿ ಮಾಡಿದರು.


ಶಿಕಾರಿಪುರ ಅತಿ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಿದೆ. ಉದ್ಯೋಗ ಸೃಷ್ಟಿ ಮತ್ತು ಪ್ರವಾಸೋದ್ಯಮ ತಾಣವನ್ನಾಗಿ ಮಾಡುವ ಕನಸು ತನ್ನದು. ಅಧಿಕಾರಕ್ಕೇರಿದ ನಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ಕೊಡಲಾಗುವುದು ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!