ಶಿವಮೊಗ್ಗ, ಮೇ4: ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.


ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!