ಶಿವಮೊಗ್ಗ ನಗರದ ದುರ್ಗಿಗುಡಿ, ಪಾರ್ಕ್ ಬಡಾವಣೆ, ಜೈಲ್ ಸರ್ಕಲ್‌ಗಳಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಮೇ ೦೩ ರಂದು ತಪಾಸಣೆಯನ್ನು ಕೈಗೊಳ್ಳಲಾಗಿದ್ದು ೦೧ ಬಾಲಕಾರ್ಮಿಕ ಹಾಗೂ ೦೨ ಕಿಶೋರರು ಕಂಡು ಬಂದಿರುತ್ತಾರೆ.


ಮಾಲೀಕನ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ಹಾಗೂ ತಿದ್ದುಪಡಿ ಕಾಯ್ದೆ ೨೦೧೬ರ ಉಲ್ಲಂಘನೆ ಕುರಿತು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಸದರಿ ಬಾಲಕರನ್ನು ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಹಾಜರುಪಡಿಸಲಾಗಿದ್ದು, ತಪಾಸಣೆಯಲ್ಲಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.


ತಪಾಸಣೆಯಲ್ಲಿ ಕಾರ್ಮಿಕ ಅಧಿಕಾರಿ ಸುಮ ಹೆಚ್.ಎಸ್, ೨ನೇ ವೃತ್ತದ ಕಾರ್ಮಿಕ ನಿರೀಕ್ಷಕ ಭೀಮೇಶ್ ಪಿ, ಯೋಜನಾ ನಿರ್ದೇಶಕ ರಘುನಾಥ ಎ.ಎಸ್ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ಪ್ರಮೋದ್ ಹಾಜರಿದ್ದರು.

ಭದ್ರಾ: ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ


ಶಿವಮೊಗ್ಗ : ೨೦೨೨-೨೩ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಎಡದಂಡೆ ನಾಲೆಗೆ ದಿ:೦೧.೦೧.೨೦೨೩ ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ ದಿ:೦೩.೦೧.೨೦೨೩ ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ ೨೦೨೨-೨೩ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ. ಅದರಂತೆ ಭದ್ರಾ ಎಡದಂಡೆ ನಾಲೆಯಲ್ಲಿ ಮೇ-೧೨ ರವರೆಗೆ ಹಾಗೂ ಬಲದಂಡೆ ನಾಲೆಯಲ್ಲಿ ಮೇ-೧೮ ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

ಮಕ್ಕಳ ಬಳಕೆ: ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲು


ಶಿವಮೊಗ್ಗ : ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ.
ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ ೧೪ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!