ಬೆಂಗಳೂರು,ಅ.13:
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಸಚಿವರೂ ಆದ ಸಾಗರದ ಕಾಗೋಡು ತಿಮ್ಮಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿಮ್ಮಪ್ಪ ಅವರಿಗೆ ಏಕಾಏಕಿ ಜ್ವರ ಕಾಣಿಸಿಕೊಂಡು ಸುಸ್ತಾದ ಹಿನ್ನೆಲೆಯಲ್ಲಿ ಕೊಂಚ ಅಸ್ವಸ್ಥಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಕೋವಿಡ್19 ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಜಯನಗರ ಅಪೊಲೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

By admin

ನಿಮ್ಮದೊಂದು ಉತ್ತರ

You missed

error: Content is protected !!