ಸೊರಬ: ಬಿಜೆಪಿಯವರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದು ಜನತೆ ಈಗಾಗಲೇ ತಿರಸ್ಕರಿಸಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ವಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಎಐಸಿಸಿ ಸದಸ್ಯ ಎಸ್. ಮಧು ಬಂಗಾರಪ್ಪ ಹೇಳಿದರು.


ಪಟ್ಟಣದ ಬಂಗಾರಧಾಮದಲ್ಲಿ ಬಿಜೆಪಿ ಸೇರಿದಂತೆ ವಿವಿಧ ಪಕ್ಷದ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಅವರು ಮಾತನಾಡಿದರು.
ಬಿಜೆಪಿ ಅಭ್ಯರ್ಥಿ ಮತಯಾಚನೆಗೆ ತೆರಳಿದ ಸಂದರ್ಭದಲ್ಲಿ ಮತದಾರರು ಘೇರಾವ್ ಹಾಕಿರುವ ಘಟನೆಗಳು ಕ್ಷೇತ್ರದಲ್ಲಿ ನಡೆದ ಉದಾಹರಣೆಗಳಿದೆ. ಆದರೆ, ತಾವು ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಾಗ ಜನತೆ ತೋರುತ್ತಿರುವ ಪ್ರೀತಿ ವಿಶ್ವಾಸವೇ ಕಾಂಗ್ರೆಸ್ ಗೆಲುವಿಗೆ

ಸಾಕ್ಷಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಜನತೆ ಒಲವು ತೋರುತ್ತಿಲ್ಲ. ಅವರ ಅಭ್ಯರ್ಥಿ ಮತಯಾಚನೆಗೆ ಆಗಮಿಸಿದ ಸಂದರ್ಭದಲ್ಲಿ ಬೆರಳೇಣಿಕೆ ಜನ ಸೇರುತ್ತಿದ್ದಾರೆ. ಆದರೆ, ತಾವು ಹೋದಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಆನವಟ್ಟಿಯಲ್ಲಿ ನಡೆದ ಬಿಜೆಪಿಯ ಬೃಹತ್ ಬಹಿರಂಗ ಸಭೆಗೆ ನೆರೆಯ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಆಗಮಿಸಿದ್ದನ್ನು ಕಾರ್ಯಕರ್ತರು ಗಮನಿಸಿದ್ದಾರೆ. ಹಣ ನೀಡಿ ಜನ ಸೇರಿಸುವ ಸ್ಥಿತಿ ಬಿಜೆಪಿಯವರದ್ದಾಗಿದೆ ಎಂದು ವ್ಯಂಗ್ಯವಾಡಿದರು.


ಕಾಂಗ್ರೆಸ್‌ಗೆ ಮತ ನೀಡಿದರೆ ರೌಡಿಗಳಿಗೆ ಮತ ನೀಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರು ಹೇಳಿಕೆ ನೀಡಿದ್ದಾರೆ. ಆದರೆ, ಅದೇ ವ್ಯಕ್ತಿ ಆನವಟ್ಟಿಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿ, ೧೫ ದಿನಗಳ ಕಾಲ ತಲೆಮರೆಸಿಕೊಂಡಿದ್ದರು. ಇಂತಹ ವ್ಯಕ್ತಿಗಳ ಜೊತೆ ವೇದಿಕೆ ಹಂಚಿಕೊಂಡರೆ ಯಡಿಯೂರಪ್ಪ ಅವರ ಗೌರವಕ್ಕೆ ಶೋಭೆತರುವುದಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ದ್ರೋಹ ಎಸಗಿ, ಮೂರು ತಿಂಗಳ ನಿಗಮ ಮಂಡಳಿ ಅಧ್ಯಕ್ಷ ಹುದ್ದೆಗಾಗಿ ಬಿಜೆಪಿ ಸೇರಿದವರು ಇದೀಗ ಬಿಜೆಪಿ ಅಭ್ಯರ್ಥಿಯ ಪರವಾಗಿ ಮಾರುದ್ದ ಭಾಷಣ ಮಾಡುತ್ತಾ ಹೊಗಳುತ್ತಿದ್ದಾರೆ. ಕೆಲವೇ ತಿಂಗಳ ಹಿಂದೆ ಅದೇ ಅಭ್ಯರ್ಥಿಗೆ ಏಕ ವಚನದಲ್ಲಿ ಮಾತನಾಡಿದ್ದನ್ನು ಅವರ ಪಕ್ಷದವರು ಮೆಲುಕು ಹಾಕಬೇಕು. ಬಿಜೆಪಿಯವರ ಸುಳ್ಳಿನ ಕಥೆ ಚುನಾವಣೆಯ ತರುವಾಯ ಅಂತ್ಯವಾಗಲಿದೆ ಎಂದರು.


ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮತ್ತು ತಮ್ಮ ನಾಯಕತ್ವ ಮೆಚ್ಚಿ ಕ್ಷೇತ್ರದಲ್ಲಿ ಬಿಜೆಪಿ ಸೇರಿದಂತೆ ಅನೇಕ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಅವರು ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳುವ ಜವಾಬ್ದಾರಿಯು ನನ್ನ ಮೇಲಿದೆ. ಈಗಾಗಲೇ ಕುಮಾರ್ ಬಂಗಾರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಾಗೂ ಸುಮಾರು ೨೫ ವರ್ಷಗಳಿಂದ ಅವರ ಆಪ್ತ ಸಹಾಯಕರಾಗಿದ್ದ ಸೈಯದ್ ನಜೀರ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದೆ. ಪುರಸಭೆಯ ಜೆಡಿಎಸ್ ಸದಸ್ಯೆ ಪ್ರೇಮಾ ಟೋಕಪ್ಪ ಹಾಗೂ ಪಕ್ಷೇತರ ಸದಸ್ಯ ಅನ್ಸರ್ ಅಹ್ಮದ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಇನ್ನೂ ಕೆಲ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧವಾಗಿದ್ದು, ಆದರೆ, ಕಾನೂನಿನ ತೊಡಕು ಇರುವ ಹಿನ್ನೆಲೆ ಪಕ್ಷ ಸೇರ್ಪಡೆಯಾಗದೇ,

ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಸಹಕರಿಸುವಂತೆ ಸೂಚಿಸಿದ್ದೇನೆ. ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಮಾನಸಿಕವಾಗಿ ಕಾಂಗ್ರೆಸ್ ಜೊತೆಗೆ ಇದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಜಿಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ, ಮುಖಂಡರಾದ ಎಚ್. ಗಣಪತಿ, ಪ್ರಶಾಂತ್ ಮೇಸ್ತ್ರಿ

, ಪರಶುರಾಮ ಸಣ್ಣಬೈಲ್, ಪ್ರಮೋದ್ ಉಪ್ಪಳ್ಳಿ, ಡಿ.ಎಸ್. ಪ್ರಸನ್ನಕುಮಾರ್ ಕುಮಾರ್ ಸೇರಿದಂತೆ ಮತ್ತಿತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!