ಶಿವಮೊಗ್ಗ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಮೊದಲನೇ ಹಂತದ ಮತದಾನ ಮುಗಿದು ಅದರಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರು 4,973 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ ಅಂತೆಯೇ ಕಾಂಗ್ರೆಸ್ನ ಸ್ಸಿ ಯೋಗೇಶ್ ಅವರು 2892 ಮತ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದು ಜೆಡಿಎಸ್ ನ ಆಯನೂರು ಮಂಜುನಾಥ್ ಅವರು ನಾನು 429 ಮತ ಪಡೆದಿದ್ದಾರೆ.

ಅಂತೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ನ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ ಅವರು 2853 ಮತ ಪಡೆಯುವ ಮೂಲಕ ಪ್ರಥಮ ಸ್ಥಾನದಲ್ಲಿದ್ದು
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿಕೆ. ಸಂಗಮೇಶ್ ಅವರು 2701 ಮತ ಪಡೆಯುವ ಮೂಲಕ ದ್ವಿತೀಯ ಸ್ಥಾನದಲ್ಲಿದ್ದಾರೆ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಸಹ 948 ಮತಗಳನ್ನು ಪಡೆದಿದ್ದಾರೆ.


ಅಂತಯೇ ತೀರ್ಥಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ 4987 ಮತ ಪಡೆಯುವ ಮೂಲಕ ಪ್ರಥಮ ಸ್ಥಾನದಲ್ಲಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ 4203 ಮತ ಪಡೆದಿದ್ದರೆ, ಜೆಡಿಎಸ್ ಅಭ್ಯರ್ಥಿ ರಾಜರಾಮ ಅವರು 148 ಮತ ಪಡೆದಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು 2855 ಮತಗಳಿಂದ ಮುನ್ನಡೆಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಹಾಲಪ್ಪ 1922 ಮತಗಳಿಂದ ದ್ವಿತೀಯ ಸ್ಥಾನದಲ್ಲಿದ್ದಾರೆ ಆಮ್ ಆದ್ಮಿ ಪಕ್ಷದ ದಿವಾಕರ್ 34ಮತಗಳನ್ನು ಪಡೆದಿಳದ್ದಾರೆ.
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮದು ಬಂಗಾರಪ್ಪ 12,076 ಮತಗಳನ್ನು ಪಡೆಯು ಮೂಲಕ ಮುನ್ನಡೆಯಲ್ಲಿದ್ದು ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ 7616 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ 1419 ಮತ ಪಡೆದಿದ್ದಾರೆ.
ಶಿಕಾರಿಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ 5176 ಮತಗಳಿಂದ ಮುನ್ನಡೆಯಲ್ಲಿದ್ದು, ಕಾಂಗ್ತೆಸ್ ಬಂಡಾಯ ಅಭ್ಯರ್ಥಿ ನಾಗರಾಜ್ ಗೌದ 3465 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ನ ಗೋಣಿ ಮಾಲತೇಶ್ 312 ಮತಗಳನ್ನು ಪಡೆದಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಪೂರ್ಯಾನಾಯ್ಕ್ 4734 ಮತ ಪಡೆದು ಮುನ್ನಡೆಯಲ್ಲಿದ್ದು, ಅಶೋಕ್ ನಾಯ್ಕ 3793 ಮತಗಳನ್ನು ಪಡೆದಿದ್ದಾರೆ. ಶ್ರೀನಿವಾಸ್ ಕರಿಯಣ್ಣ 856 ಮತಗಳನ್ನು ಪಡೆದಿದಗದಾರೆ.
