ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಆರ್. ಮೋಹನ್ ನೇತೃತ್ವದಲ್ಲಿ ಇಂದು ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.


ಚುನಾವಣೆ ಸಂದರ್ಭದಲ್ಲಿ ಶಿವಕುಮಾರ್ ಅವರು ನಾಡಿನ ಉದ್ದಗಲಕ್ಕೂ ಹಗಲು ಇರುಳೆನ್ನದೆ ಸಂಚರಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನ ಪಡೆದು ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕಿದೆ. ಅವರು

ಮಖ್ಯಮಂತ್ರಿಯಾದಲ್ಲಿ ಅಭಿವೃದ್ಧಿಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿರಲಿದೆ ಎಂದು ಮೋಹನ್ ವಿಶ್ವಾಸ ವ್ಯಕ್ತಪಡಿಸಿದರು.
ಶಿವಕುಮಾರ್ ಅವರಿಗೆ ಆಡಳಿತ ನಡೆಸಲು ಅವಕಾಶ ನೀಡಬೇಕೆಂದು ಕೋರಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತಿತರರಿಗೆ ಸಂಘದ ವತಿಯಿಂದ ಮನವಿ ಮಾಡಿಕೊಳ್ಳಲಾಗಿದೆ ಎಂದರು.


ಇದಕ್ಕೂ ಮುನ್ನ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ೬೧ ಕೆಜಿಯ ಕೇಕ್ ನೀಡಿ ಅವರಿಗೆ ೬೧ನೇ ಜನ್ಮ ದಿನದ ಶುಭಾಷಯ ಕೋರಿದರು.

By admin

ನಿಮ್ಮದೊಂದು ಉತ್ತರ

error: Content is protected !!