ಶಿವಮೊಗ್ಗ ಮಾಚೇನಹಳ್ಳಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ ೧೧೦ ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು ಕ.ವಿ.ಪ್ರ.ನಿ.ನಿ ವತಿಯಿಂದ ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ
ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಮೇ.೨೧ ರ ಬೆಳಿಗ್ಗೆ ೮ ರಿಂದ ಸಂಜೆ ೭ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ
, ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.