ಕುಡಿಯುವ ನೀರಿಯ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕೆಂದು ನೂತನ ಶಾಸಕ ಎಸ್.ಎನ್. ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ವಾರ್ಡ್ ನಂ.೨ರಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದ ಕಾರಣ ಸ್ಥಳೀಯ ನಾಗರಿಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಅದೇ ರೀತಿ ನಗರದ ಹಲವು ಕಡೆಗಳಲ್ಲಿ ನೀರಿನ ಸiಸ್ಯೆ ಇದ್ದರೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿಗೆ ತೊಂದರೆ ಇಲ್ಲ. ಆದರೆ ಸರಬರಾಜಿನಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮೀ ಶಂಕರ ನಾಂiiಕ್, ಸದಸ್ಯ ಇ. ವಿಶ್ವಾಸ್ ಅಧಿಕಾರಿಗಳಾದ ಸಿದ್ದಪ್ಪ, ತೇಜಸ್ವಿನಿ, ಜೀವನ್ ಮತ್ತು ವಾರ್ಡಿನ ಪ್ರಮುಖರು ಇದ್ದರು.