ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಬಾಲ ಕಾರ್ಮಿಕ ತಪಾಸಣೆಯನ್ನು ಹಮ್ಮಿಕೊಂಡಿದ್ದು ಓರ್ವ ಕಿಶೋರ ಕಾರ್ಮಿಕ ಪತ್ತೆಯಾಗಿರುತ್ತಾನೆ.
ಮಾಲೀಕನ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ಹಾಗೂ ತಿದ್ದುಪಡಿ ಕಾಯ್ದೆ ೨೦೧೬ರಡಿ ಸೊರಬ ತಾಲ್ಲೂಕಿನ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿರುತ್ತದೆ.
ಪತ್ತೆಯಾದ ಬಾಲಕನನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದ್ದು, ತಪಾಸಣೆಯಲ್ಲಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.
ತಂಡದಲ್ಲಿ ಸೊರಬದ ಕಾರ್ಮಿಕ ನಿರೀಕ್ಷಕರಾದ ಶಿಲ್ಪ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಘುನಾಥ ಎ.ಎಸ್ ಹಾಜರಿದ್ದರು ಎಂದು ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.