ನೂತನ ಸಚಿವರಾಗಿರುವ ಮಧು ಬಂಗಾರಪ್ಪ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜೂ.೩ರಂದು ಅಭಿನಂದಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.


ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಶಿವಮೊಗ್ಗ ಜಿಲ್ಲೆಗೂ ಪ್ರಾತಿನಿಧ್ಯ ಸಿಕ್ಕಿದೆ. ಮಧು ಬಂಗಾರಪ್ಪ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಸಚಿವರಾದ ಮೇಲೆ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಜೂ.೩ರಂದು ಆಗಮಿಸಲಿದ್ದಾರೆ. ಅಂದು ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಹೃತ್ಪೂರ್ವಕವಾಗಿ ಸ್ವಾಗತಿಸಿ ಸನ್ಮಾನಿಸಲಾಗುವುದು ಎಂದರು.


ಮಧು ಬಂಗಾರಪ್ಪ ಅವರು ಅಂದು ಬೆಳಗ್ಗೆ ಎಂಆರ್‌ಎಸ್ ವೃತ್ತದಿಂದ ಅವರನ್ನು ಬೈಕ್ ಹಾಗೂ ವಾಹನಗಳ ರ‍್ಯಾಲಿಯ ಮೂಲಕ ಮೆರವಣಿಗೆಯಲ್ಲಿ ಕರೆತರಲಾಗುವುದು. ನಂತರ ೧೦-೩೦ಕ್ಕೆ ನಗರ

ಲಗಾನ್ ಮಂದಿರದಲ್ಲಿ ಅಭಿನಂದಿಸಲಾಗುವುದು ಎಂದರು.
ಮಧು ಬಂಗಾರಪ್ಪ ಅವರ ಜೊತೆಗೆ ಶಾಸಕರಾಗಿ ಆಯ್ಕೆಯಾಗಿರುವ ಬೇಳೂರು ಗೋಪಾಲಕೃಷ್ಣ

ಮತ್ತು ಬಿ.ಕೆ. ಸಂಗಮೇಶ್ ಅವರನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಪಕ್ಷದ ಹಿರಿಯ ಮುಖಂಡರಾದ ಕಾಗೋಡು ತಿಮ್ಮಪ್ಪ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಸಚಿವರು, ಶಾಸಕರು, ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು, ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಆಗಮಿಸಲಿದ್ದಾರೆ ಎಂದರು.


ಗೋಷ್ಠಿಯಲ್ಲಿ ಪ್ರಮುಖರಾದ ಆರ್.ಪ್ರಸನ್ನಕುಮಾರ್, ಹೆಚ್.ಸಿ ಯೋಗೇಶ್, ಜಿ.ಡಿ. ಮಂಜುನಾಥ್, ಕಲಗೋಡು ರತ್ನಾಕರ್, ಹೆಚ್.ಎಂ. ಚಂದ್ರಶೇಖರಪ್ಪ, ಶಂಕರಘಟ್ಟ ರಮೇಶ್, ಇಸ್ಮಾಯಿಲ್ ಖಾನ್, ಚಂದ್ರ ಭೂಪಾಲ್, ಬಲದೇವಕೃಷ್ಣ, ವಿಶ್ವನಾಥ ಕಾಶಿ, ರಮೇಶ್ ಇಕ್ಕೇರಿ, ಎನ್.ಡಿ. ಪ್ರವೀಣಕುಮಾರ್, ಚಂದನ್ ಮತ್ತಿತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!