ಬೆಂಗಳೂರು,ಅ.21:
ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಈ ವಾರದೊಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂದು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಸಮಿತಿ ಸಲ್ಲಿಸಲಾಗಿದ್ದ ವರ್ಗಾವಣೆ ಸಂಬಂಧದ ಮನವಿ ಕುರಿತಂತೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ, ಸಾರ್ವಜನಿಕ ಇಲಾಖೆಯ ಆಯುಕ್ತರಿಗೆ ಮುಖ್ಯಮಂತ್ರಿಗಳು ಪತ್ರದಲ್ಲಿ ಸೂಚಿಸಿದ್ದಾರೆ.
ಶಾಲಾ, ಕಾಲೇಜು ಶಿಕ್ಷಕರು, ಉಪನ್ಯಾಸಕರು ವರ್ಗಾವಣೆ ಸೌಲಭ್ಯಗಳಿಲ್ಲದೇ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಸಂಘ ತಿಳಿಸಿತ್ತು. ಇದನ್ನು ಗಮನಿಸಿ ಯಡಿಯೂರಪ್ಪ ಈ ಆದೇಶ ಹೊರಡಿಸಿದ್ದಾರೆ.
ಈ ಪತ್ರದ ದಿನಾಂಕದಿಂದ ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಯಡಿಯೂರಪ್ಪ ಆದೇಶಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!