ಶಿವಮೊಗ್ಗ, ಜೂ.10:
ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಕೆಳಕಂಡ ಗ್ರಾಮ ಪ್ರದೇಶಗಳಲ್ಲಿ ಜೂ.11 ರ ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.


ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.


ಮಾಚೇನಹಳ್ಳಿ ಕಡೆಯೂ ಕರೆಂಟ್ ಕಟ್

ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜೂ.11 ರ ಬೆಳಿಗ್ಗೆ 09:00 ರಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.


ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!