ಶಿವಮೊಗ್ಗ, ಜೂ.10:
ಇಲ್ಲಿನ ಜಯ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ಬಂಗಾರ ಸರ ಕಳವು ಪ್ರಕರಣವನ್ನು ಪೊಲೀಸ್ ಇನ್ಸ್ಪೆಕ್ಟರ್ ಮಾದಪ್ಪ ಅವರ ನೇತೃತ್ವದ ತಂಡ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಆರೋಪಿಯ ಬಂಧನದ ಜೊತೆಗೆ ಸುಮಾರು 3.40 ಲಕ್ಷ ರೂ ಮೌಲ್ಯದ ಆಭರಣವನ್ನು ವಶಪಡೆದಿದೆ.
ವಿವರ: 18/05/2023 ರಂದು ಬೆಳಗಿನ ಜಾವ ಶಿವಮೊಗ್ಗ ನಗರದ ಗಾಂಧಿನಗರ ಬಿ ಬ್ಲಾಕ್ 3 ನೇ ಕ್ರಾಸ್ನ ವಾಸದ ಮನೆಯೊಂದರಲ್ಲಿ ಇಟ್ಟಿದ್ದ ಬಂಗಾರದ ಸರವನ್ನು ಯಾರೋಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ 56/2023 ಕಲಂ 380 ಐಪಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಸದರಿ ಪ್ರಕರಣದ ಆರೋಪಿತರ ಮತ್ತು ಕಳುವಾದ ಮಾಲಿನ ಪತ್ತೆಗಾಗಿ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಸುರೇಶ್ ಎಂ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಮಾದಪ್ಪ ಪೊಲೀಸ್ ನಿರೀಕ್ಷಕರು ಜಯನಗರ ಪೊಲೀಸ್ ಠಾಣೆ ರವರ ನೇತೃತ್ವದ ಕರಿಬಸಪ್ಪ, ಎಎಸ್ಐ, ಮತ್ತು ಸಿಬ್ಬಂದಿಗಳಾದ ಪಿಸಿ ಆದರ್ಶ, ರೋಷನ್, ರವಿಕಿರಣ್ ರವರುಗಳನ್ನೊಳಗೊಂಡ ತಂಡವನ್ನು ರಚಸಲಾಗಿರುತ್ತದೆ.
ಸದರಿ ತನಿಖಾ ತಂಡವು ಪ್ರಕರಣದ ಆರೋಪಿ ಚೇತನ್. ಬಿ, 32 ವರ್ಷ, ನವುಲೆ ಗ್ರಾಮ, ಶಿವಮೊಗ್ಗ ಜಿಲ್ಲೆ ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ಅಂದಾಜು ಮೌಲ್ಯ 3,40,000/- ರೂಗಳ 68 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಅಮಾನತ್ತು ಪಡಿಸಿಕೊಂಡು ಆರೋಪಿಯನ್ನು ಘನ ನ್ಯಾಯಾಲಯಕ್ಕೆ ಹಾಜರ್ ಪಡಿಸಲಾಗಿರುತ್ತದೆ.
ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
.