ಶಿವಮೊಗ್ಗ,ಜೂ.19:

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ.


ತೀರ್ಥಹಳ್ಳಿ ತಾಲ್ಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಗೆ ಭಾನುವಾರ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ಈಜಲು ತೆರಳಿದ್ದರು.


ಈ ವೇಳೆ ಇಬ್ಬರು ನಾಪತ್ತೆಯಾಗಿದ್ದರು.
ಅವರಲ್ಲಿ ಬಾಲಾಜಿ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.


ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನೀರು ಪಾಲಾದವರ ಹುಡುಕಾಟದಲ್ಲಿ ತೊಡಗಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!