ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವಲವಿಕೆಯಿಂದಿರಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಎಂದು ಶ್ರೇಯಸ್ಕರ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಶಿವಯೋಗ ಯೋಗ ಕೇಂದ್ರದ ತರಬೇತುದಾರ ಗೋಪಾಲಕೃಷ್ಣ ಅವರು ಸರಳ, ಸುಲಭ ಹಾಗೂ ಎಲ್ಲರೂ ಕಲಿಯಬಹುದಾದ ಯೋಗಾಸನ ಮತ್ತು ಪ್ರಾಣಾಯಾಮಗಳ ಕುರಿತು ಮಾಹಿತಿಯುಕ್ತ ಪ್ರಾತ್ಯಕ್ಷಿತೆ ಮತ್ತು ತರಬೇತಿ ನೀಡಿದರು
. ಇದೇ ಸಂದರ್ಭದಲ್ಲಿ ಸಿದ್ಧಯೋಗ ಧ್ಯಾನ ಕೇಂದ್ರದ ಚಂದ್ರಶೇಖರ್ ಅವರು ಧ್ಯಾನ, ಅದರ ಮಹತ್ವ ಹಾಗೂ ಅನುಸರಣಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ನೆಹರೂ ಯುವ ಕೇಂದ್ರದ
ಸಮನ್ವಯಾಧಿಕಾರಿ ಕೆ.ಟಿ.ಕೆ.ಉಲ್ಲಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ಸಹಸ್ರಾರು ಸಂಖ್ಯೆಯ ಯೋಗಪಟುಗಳು, ಕಲಿಕಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.