ಶಿವಮೊಗ್ಗ: ಮಣಿಪುರದಲ್ಲಿ ಶಾಂತಿ ಕಾಪಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕ್ರೈಸ್ತ ಸಮುದಾಯಗಳ ವೇದಿಕೆ ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.
ಮಣಿಪುರ ರಾಜ್ಯದಲ್ಲಿ ಅಮಾಯಕ ಜನರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಚರ್ಚುಗಳನ್ನು ನಾಶ ಮಾಡಲಾಗುತ್ತಿದೆ. ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ. ಸಾವಿರಾರು ಜನರು ಮನೆ ಮಠ, ಆಸ್ತಿ ಕಳೆದುಕೊಂಡ ನಿರಾಶ್ರಿತರಾಗಿ ವಲಸೆ ಹೋಗುತ್ತಿದ್ದಾರೆ.
ಇಡೀ ಮಣಿಪುರ ರಾಜ್ಯ ಅಶಾಂತಿಯ ನಾಡಾಗಿದೆ. ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ಕೂಡಲೇ ಅಲ್ಲಿ ಶಾಂತಿಯನ್ನು ಕಾಪಾಡಬೇಕು. ಮಾನವ ಹಕ್ಕುಗಳ ರಕ್ಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ವಿವಿಧ ರೀತಿಯಲ್ಲಿ ನಷ್ಟಕ್ಕೆ ಒಳಗಾದ ಅಮಾಯಕರಿಗೆ ಅಗತ್ಯವಾದ ಆರ್ಥಿಕ ನೆರವು ನೀಡಬೇಕು. ವಿಶೇಷ ಪರಿಹಾರದ ಮೂಲಕ ಅವರ ಬದುಕನ್ನು ಮರಳಿ ಕಟ್ಟಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ವೇದಿಕೆಯ ಸಂಚಾಲಕ ಬಿ. ಏಸುದಾಸ್, ಧರ್ಮಾಧ್ಯಕ್ಷ ಫ್ರಾನ್ಸಿಸ್ ಸೆರಾವೊ, ಜೋಸೆಫ್ ಆರ್. ಮಚ್ಚಾಡೊ, ಅಂತೊನಿ ವಿಲ್ಸನ್, ಪಿ.ಡಿ. ಏಸುದಾಸ್, ಫಾ. ನೆಲ್ಸನ್ ಪಿಂಟೋ, ಚಿನ್ನಪ್ಪ ಇದ್ದರು.