ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಜು.12 ರಂದು ಎಂಬಿಎ-ಎಂಸಿಎ ಸಭಾಂಗಣದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಟೆಕ್ ಕ್ರಂಚ್’ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಅಂದು ಬೆಳಗ್ಗೆ 10:00 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಜೀ ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ.ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದು, ಎಂಸಿಎ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಪ್ರಭುದೇವ ಉಪಸ್ಥಿತರಿರುವರು.

ಇಡೀ ದಿನ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗಿದ್ದು, ಐಸ್ ಬ್ರೇಕರ್, ಟಾಗಲ್, ಐಟಿ ಮ್ಯಾನೇಜರ್, ಮ್ಯಾಡ್ ಆ್ಯಡ್ಸ್, ರೀಲ್ಸ್, ಕೋಡಿಂಗ್ ಮತ್ತು ವೆಬ್ ಡಿಸೈನಿಂಗ್ ಸ್ಪರ್ಧೆಗಳು ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!